Advertisement
ಹವಾಮಾನ

ಅ.3 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಮಳೆ

Share

ಉತ್ತರನಾಡು ಹಾಗೂ ಕರಾವಳಿಯ ಹಲವೆಡೆ ವ್ಯಾಪಕ ಮಳೆಯಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಅಕ್ಟೋಬರ್ ಮೂರರವರೆಗೆ ವ್ಯಾಪಕ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಬಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಇಂದು ಹಾಗೂ ನಾಳೆ ಕೆಲವೆಡೆ ಹಗುರವಾಗಿ ಮಳೆಯಾಗಲಿದೆ. ರಾಜ್ಯದ ಉತ್ತರ ಒಳನಾಡಿನಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಯಾದಗಿರಿ ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಶೇಕಡ 223 ರಷ್ಟು ಹೆಚ್ಚಿನ ಮಳೆ ಬಿದ್ದಿರುವ ಕಾರಣ ನಾಳೆವರೆಗೂ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಯಾದಗಿರಿ ಜಿಲ್ಲಾಧಿಕಾರಿ ಕಚೇರಿ ತಿಳಿಸಿದೆ. ಮುಂದಿನ 48 ಗಂಟೆಗಳ ಕಾಲ ಭೀಮಾ ನದಿಯಲ್ಲಿ ಒಳ ಹರಿವಿನಿಂದ ನದಿ ತೀರದ ಪ್ರದೇಶಗಳಲ್ಲಿ ಪ್ರವಾಹದ ಅಪಾಯ ಕಂಡು ಬರುವ ಸಾಧ್ಯತೆ ಇರಲಿದೆ. ಭೀಮಾನದಿ, ಸನ್ನತಿ ಹಾಗೂ ಯಾದಗಿರಿ ಬ್ರಿಡ್ಜ್ ಕಂ ಬ್ಯಾರೇಜ್ ನ ಒಳ ಹರಿವು 4 ಲಕ್ಷದ 20 ಸಾವಿರ ಕ್ಯೂಸೆಕ್ಸ್ ಹಾಗೂ ಹೊರ ಹರಿವು 4 ಲಕ್ಷದ 20 ಸಾವಿರ ಕ್ಯೂಸೆಕ್ ನೀರು ಹರಿಯತ್ತಿದೆ. ನಿನ್ನೆ ರಾತ್ರಿ ಶಹಾಪುರ ತಾಲ್ಲೂಕಿನ ಹುರಸಗುಂಡಗಿ ಗ್ರಾಮದ 5 ಮನೆಗಳಿಗೆ ನೀರು ನುಗ್ಗಿದ್ದು, 5 ಕುಟುಂಬಗಳನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಿ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ. ಭೀಮಾ ನದಿ ನೀರಿನ ಪ್ರವಾಹದಿಂದ ರೋಜಾ, ಎಸ್ ಶಿರವಾಳದಿದ ಹೊಸುರ ಗ್ರಾಮದ ರಸ್ತೆ ಸಂಪರ್ಕ ಸ್ಥಗಿತಗೊಂಡಿದೆ. ಜೋಳದಡಗಿ ಸೇತುವೆ ರಸ್ತೆ ಸಂಚಾರ ಸ್ಥಗಿತಗೊಳಿಸಲಾಗಿದೆ. ಸತತ ಮಳೆಯಿಂದ ಹಾಗೂ ನದಿ ನೀರು ಕೃಷಿ ಜಮೀನುಗಳಿಗೆ ನುಗ್ಗಿ ಬೆಳೆಗಳು ಹಾನಿಯಾಗಿದ್ದು, ಸುಮಾರು 1 ಲಕ್ಷದ 14 ಸಾವಿರದ ಮುನ್ನೂರು ಹೆಕ್ಟರ್‌ನಷ್ಟು ಬೆಳೆಹಾನಿಯಾಗಿರುವುದಾಗಿ ಅಂದಾಜಿಸಲಾಗಿದ್ದು, ಜಮೀನುಗಳ ಜಂಟಿ ಸಮೀಕ್ಷೆ ಕಾರ್ಯ ಪುಗತಿಯಲ್ಲಿದೆ ಎಂದು ಜಿಲ್ಲಾಧಿಕಾರಿ ಕಚೇರಿಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…

10 hours ago

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!

ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…

1 day ago

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…

1 day ago

ಗುಜ್ಜೆ-ಕಡಲೆ ಗಸಿ – ಸರಳ ಪದಾರ್ಥಗಳಿಂದ ಸೊಗಸಾದ ಸಾಂಪ್ರದಾಯಿಕ ಸವಿರುಚಿ!

ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…

2 days ago

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

3 days ago