Advertisement
ಸುದ್ದಿಗಳು

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ | ಕೊಡಗು ಜಿಲ್ಲೆಯ ಬಹುತೇಕ ಕಡೆ ಮಳೆ |

Share

ಇಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಪ್ರಮುಖವಾಗಿ ಕುಮುಟಾ ಮತ್ತು ಅಂಕೋಲಾದಲ್ಲಿ ತಲಾ 8 ಸೆಂಟಿ ಮೀಟರ್ ಮಳೆಯಾಗಿದೆ. ಇದೇ 27 ರವರೆಗೆ ಕರಾವಳಿ ಹಾಗೂ ಒಳನಾಡಿನಲ್ಲಿ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನಲ್ಲಿ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ. ಬೆಂಗಳೂರಿನಲ್ಲಿ ಕೆಲವು ಕಡೆ ಹಗುರ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.

ಮಡಿಕೇರಿ ಸೇರಿದಂತೆ ಕೊಡಗು ಜಿಲ್ಲೆಯ ಬಹುತೇಕ ಕಡೆ ಮಳೆ ಮುಂದುವರೆದಿದೆ. ಬೆಳಗ್ಗಿನಂದಲೇ  ಸುರಿಯುತ್ತಿರುವ ಮಳೆಯಿಂದ ಅನೇಕ ಕಡೆ ಮರಗಳು ಉರುಳಿಬಿದ್ದಿವೆ. ಜಿಲ್ಲೆಯಲ್ಲಿ ಕಳೆದ  4-5 ದಿನಗಳಿಂದ ಉತ್ತಮ ಮಳೆ ಬೀಳುತ್ತಿದ್ದರೂ ಹೋಲಿಕೆಯಲ್ಲಿ ಕಳೆದ ವರ್ಷಕ್ಕಿಂತ ಕಡಮೆ ಮಳೆಯಾಗಿದೆ. ಜನವರಿಯಿಂದ ಈವರೆಗೆ ಕೊಡಗಿನಲ್ಲಿ ಕಳೆದ ವಷ 250  ಮಿಲಿ ಮೀಟರ್ ಮಳೆ ಬಿದ್ದಿದ್ದರೆ, ಈ ವರ್ಷ 216 ಮಿಲಿಮೀಟರ್ ಮಳೆಯಾಗಿದೆ. ಮಡಿಕೇರಿ ಮತ್ತು ವಿರಾಜಪೇಟೆ ತಾಲೂಕುಗಳಲ್ಲಿ ಹೆಚ್ಚಿನ ಮಳೆಯಾಗಿದ್ದರೆ, ಸೋಮವಾರಪೇಟೆ ತಾಲೂಕಿನಲ್ಲಿ ಕಡಮೆ ಮಳೆಯಾಗಿದೆ. ಮುಂದಿನ ವಾರ ಕೇರಳದ ಮೂಲಕ ಕೊಡಗು ಜಿಲ್ಲೆಗೆ ಮುಂಗಾರು ಪ್ರವೇಶಿಸುವ ನಿರೀಕ್ಷೆಯಿದ್ದು, ಈ ವರ್ಷ ಮುಂಗಾರು ಪೂರ್ವ ಮಳೆಯು ಮೇ ತಿಂಗಳಿನಲ್ಲಿಯೇ ಪ್ರಾರಂಭವಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ

ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…

14 hours ago

ಬೇವು ಲೇಪಿತ ಯೂರಿಯಾ ಬಳಕೆಯಿಂದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ

ಕೇಂದ್ರ ಸರ್ಕಾರ 2015ರಲ್ಲಿ ದೇಶೀಯ ಹಾಗೂ ಆಮದು ಯೂರಿಯಾಗೆ ಬೇವು ಲೇಪನ ಕಡ್ಡಾಯಗೊಳಿಸುವ…

14 hours ago

ಮನೆ ಎಂದರೆ ಗೋಡೆಗಳಲ್ಲ , ನೆಮ್ಮದಿಯನ್ನು ಕಟ್ಟುವ ಜೀವನಕಲೆ

ಮನೆತನವನ್ನು ಕಟ್ಟುವುದು ಕೇವಲ ಆರ್ಥಿಕ ಸೌಲಭ್ಯಗಳನ್ನು ಒದಗಿಸುವುದಲ್ಲ; ಕುಟುಂಬದ ಸದಸ್ಯರ ನಡುವೆ ಪ್ರೀತಿ,…

15 hours ago

ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ

ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…

1 day ago

ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ

ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…

1 day ago

ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!

ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…

1 day ago