ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ

July 19, 2025
9:03 PM

ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ.  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರೀ ಮಳೆಯ ಕಾರಣ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಕೆಲವು ತಾಲೂಕುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.

ಮಂಗಳೂರು ತಾಲೂಕು ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಉಳ್ಳಾಲ ನೇತ್ರಾವತಿ ಸೇತುವೆಯಿಂದ ಸುರತ್ಕಲ್, ಮುಕ್ಕ, ನಂದಿನಿ ನದಿ ಸೇತುವೆಯವರೆಗೆ ಹಾಗೂ ಪೂರ್ವದಲ್ಲಿ ವಳಚ್ಚಿಲ್, ಅಡ್ಡೂರು ಸೇತುವೆ, ಎಡಪದವು, ಬಜಪೆ ಎಕ್ಕಾರುವರೆಗಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಉಳ್ಳಾಲ ಮತ್ತು  ಬಂಟ್ವಾಳ  ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕಡಲು ಕೂಡ ಪ್ರಕ್ಷುಬ್ಧ ಗೊಂಡಿದ್ದು, ಉಳ್ಳಾಲ ಸಮುದ್ರದ ಭೋರ್ಗರೆತ ಹೆಚ್ಚಾಗಿದೆ.

ಉತ್ತರಕನ್ನಡ ಜಿಲ್ಲೆಯ ಕರಾವಳಿ ತಾಲೂಕುಗಳಾದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳಗಳಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಭಟ್ಕಳದಲ್ಲಿ ಅತೀ ಹೆಚ್ಚು 119 ಮಿಲಿ ಮೀಟರ್ ಮಳೆ ಸುರಿದಿದೆ ಹವಾಮಾನ ಇಲಾಖೆ ನಾಳೆಯವರೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 24, 2026
9:47 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror