ಹವಾಮಾನ ವರದಿ | 27-11-2024 | ಮೋಡದ ವಾತಾವರಣ | ಕೆಲವು ಕಡೆ ಮಳೆ ಸಾಧ್ಯತೆ |

November 27, 2024
2:30 PM
ಈಗಿನಂತೆ ನವೆಂಬರ್ 29 ರಿಂದ ದಕ್ಷಿಣ ಒಳನಾಡು ಹಾಗೂ 30 ರಿಂದ ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಮಳೆ ಆರಂಭವಾಗುವ ಮುನ್ಸೂಚನೆ ಇದೆ. ಈ ಮಳೆಯು ಒಂದು ವಾರದ ಕಾಲ ಇರಬಹುದೆಂದು ಮುನ್ಸೂಚನಾ ನಕ್ಷೆಗಳು ತೋರಿಸುತ್ತವೆ. ಕಾದು ನೋಡಬೇಕಾಗಿದೆ.
28.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ರಾಜ್ಯದ ದಕ್ಷಿಣ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.  ದಕ್ಷಿಣ ಕನ್ನಡ, ಉಡುಪಿ, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಣ್ಣ ಪ್ರಮಾಣದ ತುಂತುರು ಮಳೆಯ ಸಾಧ್ಯತೆಯೂ ಇದೆ. ಉತ್ತರ ಒಳನಾಡು ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಶ್ರೀಲಂಕಾ ಕರಾವಳಿಯಲ್ಲಿರುವ ವಾಯುಭಾರ ಕುಸಿತವು ತಮಿಳುನಾಡು ಕರಾವಳಿ ಮೂಲಕ ಉತ್ತರಕ್ಕೆ ಚಲಿಸುವ ವರದಿಗಳಿದ್ದರೂ, ಚಲಿಸುವ ಪಥದ ನಿಖರತೆ ಇನ್ನೂ ಸ್ಪಷ್ಟವಾಗಿಲ್ಲ. ಕೆಲವು ವರದಿಗಳು ತಮಿಳುನಾಡು ಕರಾವಳಿ ಅಪ್ಪಳಿಸುವ ಸಾಧ್ಯತೆಯನ್ನು ತೋರಿಸುತ್ತಿವೆ. ಹಾಗೇನಾದರೂ ಸಂಭವಿಸಿದರೆ ಕರ್ನಾಟಕದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮುಂದಿನ ವಾರ ಮಳೆಯಾಗುವ ಸಾಧ್ಯತೆಗಳಿವೆ.
ಈಗಿನಂತೆ ನವೆಂಬರ್ 29 ರಿಂದ ದಕ್ಷಿಣ ಒಳನಾಡು ಹಾಗೂ 30 ರಿಂದ ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಮಳೆ ಆರಂಭವಾಗುವ ಮುನ್ಸೂಚನೆ ಇದೆ. ಈ ಮಳೆಯು ಒಂದು ವಾರದ ಕಾಲ ಇರಬಹುದೆಂದು ಮುನ್ಸೂಚನಾ ನಕ್ಷೆಗಳು ತೋರಿಸುತ್ತವೆ. ಕಾದು ನೋಡಬೇಕಾಗಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಪೂರ್ವ ಮುಂಗಾರು ಸಿಡಿಲು, ಗಾಳಿ ಮಳೆಗೆ ಮುನ್ನೆಚ್ಚರಿಕೆ ವಹಿಸಿ : ವಿಜಯನಗರ ಜಿಲ್ಲಾಧಿಕಾರಿ ಸೂಚನೆ
March 10, 2026
6:48 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ: ಕೇರಳದಿಂದ ಖರೀದಿಗೆ ಸರ್ಕಾರ ನಿರ್ಧಾರ
March 10, 2026
6:43 AM
by: ದ ರೂರಲ್ ಮಿರರ್.ಕಾಂ
ಭತ್ತದ ಗದ್ದೆಯಿಂದ ಅಡಿಕೆ ತೋಟ | ಮಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬಿಚ್ಚಿಟ್ಟ ಸಂಶೋಧನೆ
March 9, 2026
10:09 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 09-03-2026 | ಕರಾವಳಿ–ಮಲೆನಾಡಿನಲ್ಲಿ ಇಂದು ಸಂಜೆ ಗುಡುಗು ಮಳೆಯ ಸಾಧ್ಯತೆ | ಮಾರ್ಚ್ ಮಧ್ಯಭಾಗದಲ್ಲಿ ಮಳೆ ಚಟುವಟಿಕೆ ಹೆಚ್ಚಳ..?
March 9, 2026
2:16 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror