ದೇಶದ ಹಲವು ಭಾಗಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಜನ ಜೀವನ ಹಾಗೂ ಸಂಚಾರ ವ್ಯವಸ್ಥೆಗೆ ಅಡ್ಡಿಯುಂಟಾಗಿದೆ. ಅರುಣಾಚಲ ಪ್ರದೇಶ, ಕರಾವಳಿ ಕರ್ನಾಟಕ, ಗುಜರಾತ್, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ತೆಲಂಗಾಣ ಮತ್ತು ಉತ್ತರಾಖಂಡದ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಶಾನ್ಯ ಭಾರತದಲ್ಲೂ ಭಾರೀ ಮಳೆ ಸಾಧ್ಯತೆಯಿದೆ. ವಾಯುವ್ಯ ಭಾರತದಲ್ಲಿ, ಪೂರ್ವ ರಾಜಸ್ಥಾನ, ಹರಿಯಾಣ, ಚಂಡೀಗಢ, ಹಿಮಾಚಲ ಪ್ರದೇಶ ಮತ್ತು ಪಂಜಾಬ್ ನಲ್ಲಿ ಭಾರಿ ಮಳೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಬಿಹಾರ, ಜಮ್ಮು, ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್, ಮುಜಾಫರಾಬಾದ್, ಜಾರ್ಖಂಡ್ ಮತ್ತು ತೆಲಂಗಾಣದಲ್ಲಿ ಗುಡುಗು ಮತ್ತು ಗಾಳಿಯೊಂದಿಗೆ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….
ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…
ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…
ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭವಾಗಿದ್ದು 2026 ಮಾರ್ಚ್ ವರೆಗೆ ಅವಕಾಶ ಕರ್ನಾಟಕ…
ಟ್ಯಾಕ್ಸಿ, ಆಟೋ ಟ್ಯಾಕ್ಟರ್, ಗೂಡ್ಸ್ ವಾಹನದ ಡ್ರೈವರ್ ಆಗಿದ್ದರೂ ಸ್ವಂತ ವಾಹನವಿಲ್ಲ ಎಂಬ…
ಮಧ್ಯಪ್ರದೇಶ ಸರ್ಕಾರದಿಂದ ಅನುದಾನಿತ ಸಂಶೋಧನಾ ಉಪಕ್ರಮವು, ಸಾಂಪ್ರದಾಯಿಕ ಹಸು ಆಧಾರಿತ ಸಿದ್ಧತೆಗಳನ್ನು ಬಳಸಿಕೊಂಡು…
ಉಪಗ್ರಹ ದತ್ತಾಂಶ ಆಧಾರಿತ CREA ವಿಶ್ಲೇಷಣೆಯ ಪ್ರಕಾರ, ಭಾರತದ 4,041 ನಗರಗಳಲ್ಲಿ 1,787…