17.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ
ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ನಿರಂತರ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಜುಲೈ 21 ರ ತನಕ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ನಿರಂತರ ಉತ್ತಮ ಮಳೆ ಮುಂದುವರಿಯಲಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾಮಾನ್ಯ ಮಳೆ ಮುಂದುವರಿಯಲಿದೆ. 21 ರ ನಂತರ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಮಲೆನಾಡು : ಕೊಡಗು ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಜುಲೈ 17 ರಂದು ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚೆನೆ ಇದೆ. ಜುಲೈ 21 ರ ತನಕ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ನಂತರ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಒಳನಾಡು : ಉತ್ತರ ಒಳನಾಡಿನ ಬೆಳಗಾವಿಯ ಒಂದೆರಡು ಕಡೆ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ದಾವಣಗೆರೆ, ಬಳ್ಳಾರಿ, ರಾಯಚೂರು, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ( ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಗುಡುಗು ಸಹ ಇರಬಹುದು.
ಈಗಿನಂತೆ ಜುಲೈ 21 ರ ತನಕ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉತ್ತರ ಭಾರತದ ಉತ್ತರ ರಾಜಸ್ಥಾನ ಹಾಗೂ ಜಾರ್ಖಂಡ್ ನಲ್ಲಿ ತಲುಪಿರುವ ತಿರುವಿಕೆಯಿಂದ ಮುಂಗಾರು ಮೇಲೆ ಯಾವುದೇ ಪರಿಣಾಮಗಳಿಲ್ಲ.
ಅರಣ್ಯ ಹಕ್ಕು ಕಾಯಿದೆ -2006 ಅಡಿಯಲ್ಲಿ ಅರಣ್ಯವಾಸಿಗಳು ಮತ್ತು ಬುಡಕಟ್ಟು ಜನಾಂಗದವರಿಗೆ ಕಾಡಿನಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಹಾಗೂ ಮರಳು ಅಭಾವದಿಂದ ಕಟ್ಟಡ ನಿರ್ಮಾಣ…
ಮಳೆಯ ಕಾರಣದಿಂದ ಅಡಿಕೆಗೆ ಬಾಧಿಸಿದ ಕೊಳೆರೋಗದ ತೀವ್ರತೆ ಹಾಗೂ ನಷ್ಟದ ಬಗ್ಗೆ ಅಖಿಲ…
ಅಡಿಕೆಗೆ ಕೊಳೆರೋಗ ವ್ಯಾಪಕವಾಗುತ್ತಿದೆ. ವಾರದ ಮೊದಲು ಕೆಲವು ಕಡೆ ಮಾತ್ರವೇ ಅಡಿಕೆಗೆ ಕೊಳೆರೋಗ…
ಅರಣ್ಯ ಅಥವಾ ಕಾಡು ಎಂದರೆ ದಟ್ಟವಾದ ಮರಗಳ ಸಮೂಹ ಮಾತ್ರವಲ್ಲ, ಅರಣ್ಯ ಎಂದರೆ…
ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಮೇಲ್ ಸ್ತರ ಹಾಗೂ ಮಧ್ಯಮ…