Advertisement
ವೆದರ್ ಮಿರರ್

ಹವಾಮಾನ ವರದಿ | 21-09-2025 | ಸೆ.29 ರವರೆಗೆ ಅಲ್ಲಲ್ಲಿ ಮಳೆ ನಿರೀಕ್ಷೆ | ವಾಯುಭಾರ ಕುಸಿತದ ಪರಿಣಾಮ ಏನು..?

Share

22.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಜೊತೆಗೆ ಮಧ್ಯಾಹ್ನ ನಂತರ ಹಾಗೂ ಸಂಜೆ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆಗಳಿವೆ. ಈಗಿನಂತೆ ಈ ವಾತಾವರಣವು ಸೆಪ್ಟೆಂಬರ್ 25 ರ ತನಕ ಮುಂದುವರಿಯಲಿದ್ದು, ನಂತರ ವಾಯುಭಾರ ಕುಸಿತದ ಪರಿಣಾಮ ಮುಂಗಾರು ಸ್ವಲ್ಪ ಚುರುಕಾಗಿ ಅಕ್ಟೊಬರ್ 1 ಅಥವಾ 2 ರ ತನಕವೂ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಜೊತೆಗೆ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಸೆಪ್ಟೆಂಬರ್ 23 ರಿಂದ ಬಿಸಿಲಿನ ವಾತಾವರಣ ಹೆಚ್ಚಲಿದ್ದು, ಸೆಪ್ಟೆಂಬರ್ 27ರಿಂದ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಕಲಬುರ್ಗಿ, ಬೀದರ್, ಯಾದಗಿರಿ, ರಾಯಚೂರು, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಮುನ್ಸೂಚನೆ ಇದೆ.

ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಸೆಪ್ಟೆಂಬರ್ 23ರ ತನಕ ದಕ್ಷಿಣ ಒಳನಾಡು ಹಾಗೂ 29ರ ತನಕ ಉತ್ತರ ಒಳನಾಡಿನ ಅಲ್ಲಲ್ಲಿ ಮಳೆಯಾಗುವ ನಿರೀಕ್ಷೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

2 hours ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

2 hours ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

18 hours ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

1 day ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

1 day ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

1 day ago