ಹವಾಮಾನ ವರದಿ | 27-09-2025 | ಅ.4 ರ ತನಕ ಕೆಲವು ಕಡೆ ಮಳೆ ಸಾಧ್ಯತೆ

September 27, 2025
12:15 PM
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಭೂ ಪ್ರವೇಶಿಸಿದ್ದು, ಒಡಿಶಾ, ಆಂದ್ರಾ, ಮಧ್ಯಪ್ರದೇಶ ಹಾಗೂ ಮಹಾರಾಷ್ಟ್ರ ಮೂಲಕ ತಿರುಗುತ್ತಿದೆ. ಸೆಪ್ಟೆಂಬರ್ 28ರಂದು ಮಹಾರಾಷ್ಟ್ರದ ಮುಂಬೈ ಕರಾವಳಿಯ ಮೂಲಕ ಅರಬ್ಬಿ ಸಮುದ್ರ ಸೇರುವ ಸಾಧ್ಯತೆಗಳಿವೆ.

28.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ದೀರ್ಘ ಅವಧಿಯ ಮಳೆ ಸ್ವಲ್ಪ ಹೆಚ್ಚಿರಬಹುದು.  ಈಗಿನಂತೆ ಸೆಪ್ಟೆಂಬರ್ 29 ರಿಂದ ಮಳೆಯ ತೀವ್ರತೆ ಕಡಿಮೆಯಾಗಬಹುದು. ಅಕ್ಟೊಬರ್ 4 ರ ತನಕ ಈ ಮಳೆಯು ಮುಂದುವರಿಯುವ ಲಕ್ಷಣಗಳಿವೆ.

ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ ಇದ್ದು, ಚಿಕ್ಕಮಗಳೂರಿನ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಹಾಸನದ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.  ಈಗಿನಂತೆ ಸೆಪ್ಟೆಂಬರ್ 28ರಿಂದ ಮಳೆ ಕಡಿಮೆಯಾಗುವ ಸೂಚನೆಗಳಿವೆ. ಆದರೆ ಅಕ್ಟೊಬರ್ 4 ರಿಂದ 2 ದಿವಸಗಳ ಕಾಲ ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಈಗಿನಂತೆ ಉತ್ತರ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 29 ರಿಂದ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗುವ ಲಕ್ಷಣಗಳಿವೆ. ದಕ್ಷಿಣ ಒಳನಾಡು ಭಾಗಗಳಲ್ಲಿ ಈಗಾಗಲೇ ಮಳೆ ಕಡಿಮೆಯಾಗಿದ್ದು, ಅಕ್ಟೊಬರ್ 2 ಅಥವಾ 3 ರಿಂದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಭೂ ಪ್ರವೇಶಿಸಿದ್ದು, ಒಡಿಶಾ, ಆಂದ್ರಾ, ಮಧ್ಯಪ್ರದೇಶ ಹಾಗೂ ಮಹಾರಾಷ್ಟ್ರ ಮೂಲಕ ತಿರುಗುತ್ತಿದೆ. ಸೆಪ್ಟೆಂಬರ್ 28 ರಂದು ಮಹಾರಾಷ್ಟ್ರದ ಮುಂಬೈ ಕರಾವಳಿಯ ಮೂಲಕ ಅರಬ್ಬಿ ಸಮುದ್ರ ಸೇರುವ ಸಾಧ್ಯತೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror