28.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ದೀರ್ಘ ಅವಧಿಯ ಮಳೆ ಸ್ವಲ್ಪ ಹೆಚ್ಚಿರಬಹುದು. ಈಗಿನಂತೆ ಸೆಪ್ಟೆಂಬರ್ 29 ರಿಂದ ಮಳೆಯ ತೀವ್ರತೆ ಕಡಿಮೆಯಾಗಬಹುದು. ಅಕ್ಟೊಬರ್ 4 ರ ತನಕ ಈ ಮಳೆಯು ಮುಂದುವರಿಯುವ ಲಕ್ಷಣಗಳಿವೆ.
ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ ಇದ್ದು, ಚಿಕ್ಕಮಗಳೂರಿನ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಹಾಸನದ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಈಗಿನಂತೆ ಸೆಪ್ಟೆಂಬರ್ 28ರಿಂದ ಮಳೆ ಕಡಿಮೆಯಾಗುವ ಸೂಚನೆಗಳಿವೆ. ಆದರೆ ಅಕ್ಟೊಬರ್ 4 ರಿಂದ 2 ದಿವಸಗಳ ಕಾಲ ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಈಗಿನಂತೆ ಉತ್ತರ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 29 ರಿಂದ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗುವ ಲಕ್ಷಣಗಳಿವೆ. ದಕ್ಷಿಣ ಒಳನಾಡು ಭಾಗಗಳಲ್ಲಿ ಈಗಾಗಲೇ ಮಳೆ ಕಡಿಮೆಯಾಗಿದ್ದು, ಅಕ್ಟೊಬರ್ 2 ಅಥವಾ 3 ರಿಂದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಭೂ ಪ್ರವೇಶಿಸಿದ್ದು, ಒಡಿಶಾ, ಆಂದ್ರಾ, ಮಧ್ಯಪ್ರದೇಶ ಹಾಗೂ ಮಹಾರಾಷ್ಟ್ರ ಮೂಲಕ ತಿರುಗುತ್ತಿದೆ. ಸೆಪ್ಟೆಂಬರ್ 28 ರಂದು ಮಹಾರಾಷ್ಟ್ರದ ಮುಂಬೈ ಕರಾವಳಿಯ ಮೂಲಕ ಅರಬ್ಬಿ ಸಮುದ್ರ ಸೇರುವ ಸಾಧ್ಯತೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…
ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…
ದೇಶದಲ್ಲಿ LPG ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಿಸಲಾಗಿದೆ.…
ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.…
2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್‌ನಿನೋ ಪರಿಣಾಮದಿಂದ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…