ರಾಜ್ಯದ ಉತ್ತರ ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಮಳೆಯಾಗಿದೆ.ಕೋಲಾರ ಜಿಲ್ಲೆಯ ಕೆಜಿಎಫ್ ನಲ್ಲಿ ಒಂದು ಗಂಟೆಯಿಂದ ಧಾರಾಕಾರ ಮಳೆಯಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರೆದಿದೆ.ಮುಂದಿನ ೨೪ ಗಂಟೆಗಳಲ್ಲಿ ದಕ್ಷಿಣಕನ್ನಡ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಸೇರಿದಂತೆ ಕೆಲವು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕಲಬುರಗಿ ಜಿಲ್ಲೆಯ ಚಿಂಚೋಳಿಯಲ್ಲಿ 3 ಸೆಂಟಿಮೀಟರ್, ಕಮಲಾಪುರದಲ್ಲಿ 2 ಸೆಂಟಿಮೀಟರ್ ಹಾಗೂ ಸೇಡಂನಲ್ಲಿ 2 ಸೆಂಟಿಮೀಟರ್ ಮಳೆಯಾಗಿದೆ. ಇದೇ ವೇಳೆ ರಾಯಚೂರು ಜಿಲ್ಲೆಯ ದೇವದುರ್ಗದಲ್ಲಿ 1 ಸೆಂಟಿಮೀಟರ್ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೋಲಾರ ಜಿಲ್ಲೆಯ ಕೆಜಿಎಫ್ ನಲ್ಲಿ ಧಾರಾಕಾರ ಮಳೆಯಾಗಿದೆ. ತಾಲೂಕಿನ ಬೇತಮಂಗಲದಲ್ಲಿ ಮಳೆ ನೀರು ಮನೆಗಳಿಗೆ ನುಗ್ಗಿದೆ. ಎಡೆಬಿಡದೆ ಮಳೆ ಸುರಿಯುತ್ತಿದ್ದು ಕೋಲಾರ, ಶ್ರೀನಿವಾಸಪುರ ತಾಲೂಕಿನಲ್ಲೂ ಜೋರು ಗಾಳಿ ಸಹಿತ ಮಳೆಯಾಗುತ್ತಿದೆ.
ಮುಂದಿನ 24 ಗಂಟೆಗಳಲ್ಲಿ ದಕ್ಷಿಣಕನ್ನಡ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಸೇರಿದಂತೆ ಕೆಲವು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಸುತ್ತಮುತ್ತ ಭಾಗಶಃ ಮೋಡಕವಿದ ವಾತಾವರಣ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ 33, ಕನಿಷ್ಠ 22 ಡಿಗ್ರಿ ಸೆಲ್ಸಿಯೆಸ್ ತಾಪಮಾನ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.