ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

August 13, 2025
7:26 AM

ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಆ.17 ರವರೆಗೆ ವ್ಯಾಪಕ ಮಳೆಯಾಗಲಿದೆ. ಬೆಂಗಳೂರಿನ ಕೆಲವೆಡೆ 17 ವರೆಗೆ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಉಳಿದಂತೆ ಕರಾವಳಿ, ಕೊಡಗು, ಉತ್ತರ ಕನ್ನಡ, ಹಾಸನ, ಬೀದರ್, ಕಲ್ಬುರ್ಗಿ, ಹಾವೇರಿ, ವಿಜಯಪುರ, ಕೊಪ್ಪಳ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಡಾ.ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ.

ದೇಶದ ವಿವಿಧ ಭಾಗದಲ್ಲಿ ಕೂಡಾ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ತೆಲಂಗಾಣದಲ್ಲಿಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ರೆಡ್ ಅಲರ್ಟ್ ನೀಡಿದೆ. ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್, ಮುಜಫರಾಬಾದ್, ಉತ್ತರಾಖಂಡ್, ಹಿಮಾಚಲ ಪ್ರದೇಶ, ಬಿಹಾರ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಒಡಿಶಾ ಮತ್ತು ಆಂಧ್ರಪ್ರದೇಶದಲ್ಲಿ ಮುಂದಿನ ಎರಡು ಮೂರು ದಿನಗಳವರೆಗೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ದೆಹಲಿ, ಪಂಜಾಬ್ ಮತ್ತು ಹರಿಯಾಣದಲ್ಲಿ ನಾಳೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ಎರಡು ದಿನಗಳಲ್ಲಿ ಈಶಾನ್ಯ ಭಾರತದ ಹಲವೆಡೆ ಗುಡುಗು ಮತ್ತು ಮಿಂಚಿನೊಂದಿಗೆ  ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಆಂಧ್ರಪ್ರದೇಶ, ಕೊಂಕಣ, ಗೋವಾ, ಕೇರಳ ಮತ್ತು ಮಾಹೆ, ಮಹಾರಾಷ್ಟ್ರ, ಮಧ್ಯಪ್ರದೇಶ, ಮರಾಠವಾಡ, ತಮಿಳುನಾಡು, ಪುದುಚೇರಿ, ಉತ್ತರ ಪ್ರದೇಶ ಮತ್ತು ಉತ್ತರಾಖಂಡಗಳಲ್ಲಿ ಈ ತಿಂಗಳ 14 ರವರೆಗೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ
August 23, 2026
3:24 PM
by: ಸಾಯಿಶೇಖರ್ ಕರಿಕಳ
ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ
August 23, 2026
2:16 PM
by: ದ ರೂರಲ್ ಮಿರರ್.ಕಾಂ
ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ
August 23, 2026
12:18 PM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ
August 23, 2026
11:47 AM
by: ಮಿರರ್‌ ಡೆಸ್ಕ್‌

You cannot copy content of this page - Copyright -The Rural Mirror