ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಆ.17 ರವರೆಗೆ ವ್ಯಾಪಕ ಮಳೆಯಾಗಲಿದೆ. ಬೆಂಗಳೂರಿನ ಕೆಲವೆಡೆ 17 ವರೆಗೆ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಉಳಿದಂತೆ ಕರಾವಳಿ, ಕೊಡಗು, ಉತ್ತರ ಕನ್ನಡ, ಹಾಸನ, ಬೀದರ್, ಕಲ್ಬುರ್ಗಿ, ಹಾವೇರಿ, ವಿಜಯಪುರ, ಕೊಪ್ಪಳ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಡಾ.ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ.
ದೇಶದ ವಿವಿಧ ಭಾಗದಲ್ಲಿ ಕೂಡಾ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ತೆಲಂಗಾಣದಲ್ಲಿಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ರೆಡ್ ಅಲರ್ಟ್ ನೀಡಿದೆ. ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್, ಮುಜಫರಾಬಾದ್, ಉತ್ತರಾಖಂಡ್, ಹಿಮಾಚಲ ಪ್ರದೇಶ, ಬಿಹಾರ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಒಡಿಶಾ ಮತ್ತು ಆಂಧ್ರಪ್ರದೇಶದಲ್ಲಿ ಮುಂದಿನ ಎರಡು ಮೂರು ದಿನಗಳವರೆಗೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ದೆಹಲಿ, ಪಂಜಾಬ್ ಮತ್ತು ಹರಿಯಾಣದಲ್ಲಿ ನಾಳೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ಎರಡು ದಿನಗಳಲ್ಲಿ ಈಶಾನ್ಯ ಭಾರತದ ಹಲವೆಡೆ ಗುಡುಗು ಮತ್ತು ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಆಂಧ್ರಪ್ರದೇಶ, ಕೊಂಕಣ, ಗೋವಾ, ಕೇರಳ ಮತ್ತು ಮಾಹೆ, ಮಹಾರಾಷ್ಟ್ರ, ಮಧ್ಯಪ್ರದೇಶ, ಮರಾಠವಾಡ, ತಮಿಳುನಾಡು, ಪುದುಚೇರಿ, ಉತ್ತರ ಪ್ರದೇಶ ಮತ್ತು ಉತ್ತರಾಖಂಡಗಳಲ್ಲಿ ಈ ತಿಂಗಳ 14 ರವರೆಗೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಿದೆ.
ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…
ಅಡಿಕೆ ಮಾರುಕಟ್ಟೆಯ ಇತ್ತೀಚಿನ ಕುಸಿತ ಜಾಗತಿಕ ರಾಜಕೀಯ ಅನಿಶ್ಚಿತತೆ ಹಾಗೂ ಹಣದ ಹರಿವು…
ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…
ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…
ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…
ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…