ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ | ಕೆಜಿಎಫ್ ನಲ್ಲಿ ಧಾರಾಕಾರ ಮಳೆ | ಮುಂದಿನ 24 ಗಂಟೆಗಳಲ್ಲಿ ವಿವಿದೆಡೆ ಮಳೆ ಸಾಧ್ಯತೆ |

March 22, 2025
10:47 PM
ಮುಂದಿನ 24 ಗಂಟೆಗಳಲ್ಲಿ ದಕ್ಷಿಣಕನ್ನಡ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಸೇರಿದಂತೆ ಕೆಲವು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

ರಾಜ್ಯದ ಉತ್ತರ ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಮಳೆಯಾಗಿದೆ.ಕೋಲಾರ ಜಿಲ್ಲೆಯ ಕೆಜಿಎಫ್ ನಲ್ಲಿ ಒಂದು ಗಂಟೆಯಿಂದ  ಧಾರಾಕಾರ ಮಳೆಯಾಗಿದೆ.  ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರೆದಿದೆ.ಮುಂದಿನ ೨೪ ಗಂಟೆಗಳಲ್ಲಿ ದಕ್ಷಿಣಕನ್ನಡ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಸೇರಿದಂತೆ ಕೆಲವು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕಲಬುರಗಿ ಜಿಲ್ಲೆಯ ಚಿಂಚೋಳಿಯಲ್ಲಿ 3 ಸೆಂಟಿಮೀಟರ್, ಕಮಲಾಪುರದಲ್ಲಿ 2 ಸೆಂಟಿಮೀಟರ್ ಹಾಗೂ ಸೇಡಂನಲ್ಲಿ 2 ಸೆಂಟಿಮೀಟರ್ ಮಳೆಯಾಗಿದೆ. ಇದೇ ವೇಳೆ ರಾಯಚೂರು ಜಿಲ್ಲೆಯ ದೇವದುರ್ಗದಲ್ಲಿ 1 ಸೆಂಟಿಮೀಟರ್ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೋಲಾರ ಜಿಲ್ಲೆಯ ಕೆಜಿಎಫ್ ನಲ್ಲಿ ಧಾರಾಕಾರ ಮಳೆಯಾಗಿದೆ.  ತಾಲೂಕಿನ ಬೇತಮಂಗಲದಲ್ಲಿ ಮಳೆ ನೀರು  ಮನೆಗಳಿಗೆ ನುಗ್ಗಿದೆ.  ಎಡೆಬಿಡದೆ  ಮಳೆ ಸುರಿಯುತ್ತಿದ್ದು ಕೋಲಾರ, ಶ್ರೀನಿವಾಸಪುರ ತಾಲೂಕಿನಲ್ಲೂ ಜೋರು ಗಾಳಿ ಸಹಿತ  ಮಳೆಯಾಗುತ್ತಿದೆ.

ಮುಂದಿನ 24 ಗಂಟೆಗಳಲ್ಲಿ ದಕ್ಷಿಣಕನ್ನಡ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಸೇರಿದಂತೆ ಕೆಲವು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಸುತ್ತಮುತ್ತ ಭಾಗಶಃ ಮೋಡಕವಿದ ವಾತಾವರಣ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ 33, ಕನಿಷ್ಠ 22 ಡಿಗ್ರಿ ಸೆಲ್ಸಿಯೆಸ್ ತಾಪಮಾನ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ
October 12, 2026
12:17 PM
by: ದ ರೂರಲ್ ಮಿರರ್.ಕಾಂ
ಬರಗಾಲದಲ್ಲೂ ಬೆಳೆ ಉಳಿಸಿದ ಸಾವಯವ ಕೃಷಿ – ಸಾವಯವ ಕೃಷಿ ಅಬ್ಬರಿಸಿ ಬರುವುದಿಲ್ಲ- ಮುಗ್ಗರಿಸಿ ಬೀಳುವುದಿಲ್ಲ..!
October 12, 2026
7:30 AM
by: ಮಹೇಶ್ ಪುಚ್ಚಪ್ಪಾಡಿ
ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ
October 11, 2026
10:37 AM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ
October 11, 2026
10:24 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror