ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ನೇತ್ರಾವತಿ, ಕುಮಾರಧಾರ, ಫಲ್ಗುಣಿ ನದಿಗಳು ತುಂಬಿ ಹರಿಯುತ್ತಿವೆ. ಸತತ ಮಳೆಯ ಹಿನ್ನೆಲೆಯಲ್ಲಿ ಕರಾವಳಿಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ. ದ ಕ ಜಿಲ್ಲೆಯ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಸತತ ಮಳೆಯ ಪರಿಣಾಮ ಕಳೆದ 24 ಗಂಟೆಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಮೂರು ಮನೆಗಳಿಗೆ ಹಾನಿಯಾಗಿದೆ. ಈ ಪೈಕಿ ಒಂದು ಮನೆ ಸಂಪೂರ್ಣವಾಗಿ ಕುಸಿದಿದೆ. 30 ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು, 11 ವಿದ್ಯುತ್ ಪರಿವರ್ತಕಗಳು ಹಾನಿಗೊಂಡಿವೆ. ಮಡಿಕೇರಿ ಸೇರಿದಂತೆ ಕೊಡಗು ಜಿಲ್ಲೆಯಲ್ಲಿಂದು ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಬೆಳಗ್ಗಿನಿಂದಲೇ ಮಡಿಕೇರಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಸಾಮಾನ್ಯ ಜನಜೀವನ ವ್ಯತ್ಯಯವಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದು, ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಕೊಪ್ಪ, ಶೃಂಗೇರಿ ಸೇರಿದಂತೆ ಜಿಲ್ಲೆಯ ಮಲೆನಾಡು ಅರೆ ಮಲೆನಾಡು ಭಾಗಗಳಲ್ಲಿ ಸಾಧಾರಣದಿಂದ ಹೆಚ್ಚಿನ ಮಳೆಯಾಗುತ್ತಿದೆ.
ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…
ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…