ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಇಂದು ಕೂಡಾ ಮಳೆಯಾಗಿದೆ. ಮುಂದಿನ ಮೂರು ದಿನಗಳ ಕಾಲ ರಾಜ್ಯದ ಕೆಲವೆಡೆ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಎ.2, 3 ಹಾಗೂ 4 ರಂದು ಕರಾವಳಿ ಹಾಗೂ ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಬೆಂಗಳೂರು ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ. ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರಕನ್ನಡ, ದಕ್ಷಿಣಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಸಿದ್ದಾರೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel