ಹವಾಮಾನ ವರದಿ | 24-06-2025 | ಬದಲಾಯ್ತು ಹವಾಮಾನ ಲಕ್ಷಣಗಳು | ಜೂ.28 ವರೆಗೂ ಉತ್ತಮ ಮಳೆ ನಿರೀಕ್ಷೆ |

June 24, 2025
11:51 AM
ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆಯ ಕಾರಣದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು, ಜೂನ್ 29ರಿಂದ ಅಲ್ಪ ಪ್ರಮಾಣದಲ್ಲಿ ದುರ್ಬಲಗೊಳ್ಳುವ ಲಕ್ಷಣಗಳಿವೆ. 

25.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಗಾಳಿ ಹಾಗೂ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಈಗಿನಂತೆ ಜೂನ್ 29 ರಿಂದ ಸ್ವಲ್ಪ ಮಟ್ಟಿಗೆ ಮಳೆ ಕಡಿಮೆ ಆಗುವ ಲಕ್ಷಣಗಳಿವೆ. (ನಿನ್ನೆಯ ತನಕ ಜೂನ್ 29ರಿಂದ ಪೂರ್ತಿ ಕಡಿಮೆಯಾಗುವ ಮುನ್ಸೂಚನೆ ಇತ್ತು. ಈಗ ಬದಲಾಗಿದೆ)

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಜೂನ್ 28ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.  ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಈಗಿನಂತೆ ಜೂನ್ 27ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆಯ ಕಾರಣದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು, ಜೂನ್ 29ರಿಂದ ಅಲ್ಪ ಪ್ರಮಾಣದಲ್ಲಿ ದುರ್ಬಲಗೊಳ್ಳುವ ಲಕ್ಷಣಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

₹1.65 ಲಕ್ಷದ ಐಫೋನ್‌ಗಾಗಿ ಬೆಳಗ್ಗೆಯಿಂದಲೇ ಸರದಿ..! ಬೆಂಗಳೂರಿನಿಂದ ಮುಂಬೈವರೆಗೆ ಕಂಡ ‘ಐಫೋನ್‌ ಕ್ರೇಜ್’
September 22, 2026
8:02 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-09-2026 | ಕರಾವಳಿಯಲ್ಲಿ ಜೋರು ಮಳೆಯ ಸಾಧ್ಯತೆ ಕಡಿಮೆ
September 21, 2026
12:57 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ
September 20, 2026
3:13 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ
September 20, 2026
10:43 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror