25.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಗಾಳಿ ಹಾಗೂ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಈಗಿನಂತೆ ಜೂನ್ 29 ರಿಂದ ಸ್ವಲ್ಪ ಮಟ್ಟಿಗೆ ಮಳೆ ಕಡಿಮೆ ಆಗುವ ಲಕ್ಷಣಗಳಿವೆ. (ನಿನ್ನೆಯ ತನಕ ಜೂನ್ 29ರಿಂದ ಪೂರ್ತಿ ಕಡಿಮೆಯಾಗುವ ಮುನ್ಸೂಚನೆ ಇತ್ತು. ಈಗ ಬದಲಾಗಿದೆ)
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಜೂನ್ 28ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಈಗಿನಂತೆ ಜೂನ್ 27ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆಯ ಕಾರಣದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು, ಜೂನ್ 29ರಿಂದ ಅಲ್ಪ ಪ್ರಮಾಣದಲ್ಲಿ ದುರ್ಬಲಗೊಳ್ಳುವ ಲಕ್ಷಣಗಳಿವೆ.
ರಾಜ್ಯದ ಉತ್ತರ ಒಳನಾಡಿನಲ್ಲಿ ನೈರುತ್ಯ ಮಾನ್ಸೂನ್ ಸಕ್ರಿಯವಾಗಿದ್ದು, ಕರಾವಳಿ ಕರ್ನಾಟಕ ಮತ್ತು ದಕ್ಷಿಣ…
ಭಾರತೀಯ ಸಂಸ್ಕೃತಿಯಲ್ಲಿ ನವರಾತ್ರಿ ಮತ್ತು ದಸರಾ ಅತ್ಯಂತ ಪವಿತ್ರ ಹಬ್ಬಗಳಾಗಿವೆ. “ನವರಾತ್ರಿ” ಅಂದರೆ…
ಸಾಗರದ ರಾಘವೇಶ್ವರ ಸಭಾ ಭವನದಲ್ಲಿ ಸೆ. 22ರಿಂದ ಆರಂಭಗೊಳ್ಳುವ ನವರಾತ್ರ ನಮಸ್ಯಾ ಕಾರ್ಯಕ್ರಮದಲ್ಲಿ…
22.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಮಹಾಲಯ ಅಮಾವಾಸ್ಯೆ (ಪಿತೃ ಅಮಾವಾಸ್ಯೆ) ಹಿಂದೂ ಧಾರ್ಮಿಕ ಸಂಪ್ರದಾಯದಲ್ಲಿ ಪಿತೃಗಳಿಗೆ ತರ್ಪಣ, ಶ್ರಾದ್ಧ,…
ಸಾಧಕನು ಮಾತನಾಡುವುದಿಲ್ಲ. ಆತನ ಸಾಧನೆ ಮಾತನಾಡುತ್ತದೆ, ಮಾತನಾಡುತ್ತಿತ್ತು. ನಮ್ಮ ಹಿರಿಯರನೇಕರು ಈ ಹಾದಿಯಲ್ಲಿ…