ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಹಲವು ಕಡೆ ಮುಂದಿನ ಮೂರು ದಿನ ಮಳೆ ಸುರಿಯಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ತುಮಕೂರು ಜಿಲ್ಲೆಗಳ ಒಂದೆರಡು ಕಡೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಗಳಿವೆ.
ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಕೆಲವೆಡೆ ಮಳೆ: ಗುರುವಾರ ದಕ್ಷಿಣ ಒಳನಾಡಿನ ಒಂದೆರಡು ಕಡೆ ಮಳೆಯಾಗಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿದಿದೆ. ಮೈಸೂರು 3 ಸೆಂ.ಮೀ., ಚಾಮರಾಜನಗರದ ಬಂಡೀಪುರ, ರಾಮನಗರದ ಚನ್ನಪಟ್ಟಣ ತಲಾ 2 ಸೆಂ.ಮೀ., ಚಾಮರಾಜನಗರ, ಮಂಡ್ಯದ ಶ್ರೀರಂಗಪಟ್ಟಣದಲ್ಲಿ ತಲಾ 1 ಸೆಂ.ಮೀ. ಮಳೆಯಾಗಿದೆ.
ಕಲಬುರಗಿಯಲ್ಲಿ ರಾಜ್ಯದಲ್ಲೇ ಅತ್ಯಧಿಕ 39.7 ಡಿ.ಸೆ. ತಾಪಮಾನ ದಾಖಲಾಗಿದೆ. ರಾಯಚೂರು 39, ಗದಗ 37.4, ಬಳ್ಳಾರಿ 38.3, ದಾವಣಗೆರೆ 36, ಬಿದರ್ 36, ವಿಜಯಪುರ 36.6, ಶಿವಮೊಗ್ಗ 36, ಮೈಸೂರು 35, ಬೆಂಗಳೂರು 34, ಮಂಡ್ಯ 35.6 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿದೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel