ವೆದರ್ ಮಿರರ್

ಮುಂದಿನ 3 ದಿನ ಬೆಂಗಳೂರು ಸೇರಿ ಹಲವೆಡೆ ಮಳೆ ಸಾಧ್ಯತೆ : ಬಿಸಿಲ ಬೇಗೆಗೆ ವರುಣ ತಂಪೆರೆಯುವ ಸಾಧ್ಯತೆ

Share

ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಹಲವು ಕಡೆ ಮುಂದಿನ ಮೂರು ದಿನ ಮಳೆ ಸುರಿಯಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ತುಮಕೂರು ಜಿಲ್ಲೆಗಳ ಒಂದೆರಡು ಕಡೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಗಳಿವೆ.

ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಕೆಲವೆಡೆ ಮಳೆ: ಗುರುವಾರ ದಕ್ಷಿಣ ಒಳನಾಡಿನ ಒಂದೆರಡು ಕಡೆ ಮಳೆಯಾಗಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿದಿದೆ. ಮೈಸೂರು 3 ಸೆಂ.ಮೀ., ಚಾಮರಾಜನಗರದ ಬಂಡೀಪುರ, ರಾಮನಗರದ ಚನ್ನಪಟ್ಟಣ ತಲಾ 2 ಸೆಂ.ಮೀ., ಚಾಮರಾಜನಗರ, ಮಂಡ್ಯದ ಶ್ರೀರಂಗಪಟ್ಟಣದಲ್ಲಿ ತಲಾ 1 ಸೆಂ.ಮೀ. ಮಳೆಯಾಗಿದೆ.

ಕಲಬುರಗಿಯಲ್ಲಿ ರಾಜ್ಯದಲ್ಲೇ ಅತ್ಯಧಿಕ 39.7 ಡಿ.ಸೆ. ತಾಪಮಾನ ದಾಖಲಾಗಿದೆ. ರಾಯಚೂರು 39, ಗದಗ 37.4, ಬಳ್ಳಾರಿ 38.3, ದಾವಣಗೆರೆ 36, ಬಿದರ್‌ 36, ವಿಜಯಪುರ 36.6, ಶಿವಮೊಗ್ಗ 36, ಮೈಸೂರು 35, ಬೆಂಗಳೂರು 34, ಮಂಡ್ಯ 35.6 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿದೆ.

 

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಒಂದು ವರ್ಷದಲ್ಲಿ 10 ಲಕ್ಷ ಮನೆಗಳಿಗೆ ಸೌರ ಫಲಕ

ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…

5 hours ago

ನಂದಿನಿ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ

ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …

5 hours ago

ಹೆಚ್ಚುತ್ತಿರುವ ಸೈಬರ್ ಅಪರಾಧ ಪ್ರಕರಣಗಳು | ಒಂದು ವರ್ಷದಲ್ಲಿ 22 ಸಾವಿರ ಸೈಬರ್ ಪ್ರಕರಣ ದಾಖಲು |

ದಿನದಿಂದ ದಿನಕ್ಕೆ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ…

5 hours ago

ಬೆಳ್ಳಿ ಧರಿಸುವುದು ಎಲ್ಲಾ ರಾಶಿಯವರಿಗೆ ಉತ್ತಮವೇ…? | ಯಾವೆಲ್ಲಾ ರಾಶಿಗಳಿಗಳಿಗೆ ಹಾನಿ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

5 hours ago

ಸಂಬಾರ ಮಂಡಳಿಯ ದರ ಪಟ್ಟಿಯಲ್ಲಿ ಶಿರಸಿಯ ಕಾಳುಮೆಣಸು ನಮೂದಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ

ಶಿರಸಿಯ ಕಾಳುಮೆಣಸಿನ ಬೆಲೆಯನ್ನು ಸಂಬಾರ ಮಂಡಳಿಯ ದರಪಟ್ಟಿಯಲ್ಲಿ ನಮೂದಿಸುವಂತೆ ಕೇಂದ್ರ ವಾಣಿಜ್ಯ ಸಚಿವ…

13 hours ago

ಹೆತ್ತವರವನ್ನು ನೋಡಿಕೊಳ್ಳದ ಮಕ್ಕಳ ದಾನಪತ್ರ ರದ್ದುಗೊಳಿಸುವ ಅವಕಾಶ ಕಾನೂನಿನಲ್ಲಿದೆ | ಸಚಿವ ಕೃಷ್ಣಭೈರೇಗೌಡ

ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ನೀಡಿದ ದಾನಪತ್ರವನ್ನು…

13 hours ago