Advertisement
MIRROR FOCUS

ರಾಜ್ಯದ ಬಹುತೇಕ ಕಡೆಗಳಲ್ಲಿ ಮಳೆ | ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ಭೂಕುಸಿತ ಸಾಧ್ಯತೆ | ಮತ್ತೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

Share

ರಾಜ್ಯದಲ್ಲಿ ನೈಋತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರವಾಗಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಸಕ್ರಿಯವಾಗಿತ್ತು.  ರಾಜ್ಯದ ಬಹುತೇಕ ಕಡೆಗಳಲ್ಲಿ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್‌ರಾಕ್‌ನಲ್ಲಿ 24 ಸೆಂಟಿ ಮೀಟರ್ ಮಳೆಯಾಗಿದೆ.  ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಕೆಲವೆಡೆ ನಿರಂತರ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರೆಡ್ ಅಲರ್ಟ್ ಘೋಷಿಸಲಾಗಿದೆ.  ಮುಂದಿನ ಮೂರು ದಿನ ಈ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರಬ್ಬಿ ಸಮುದ್ರದಲ್ಲಿ ಭಾರಿ ಗಾತ್ರದ ಅಲೆಗಳು ಉದ್ಭವಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ. ಬೆಂಗಳೂರಿನಲ್ಲೂ ಇಂದು ಮಳೆಯಾಗುವ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ WhatsApp Channel   ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ

ಬೆಳಗಾವಿ, ಬೀದರ್, ಕಲಬುರಗಿ ಮತ್ತು ವಿಜಯಪುರ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ.  ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ಭೂಕುಸಿತ ಸಾಧ್ಯತೆ ಹೆಚ್ಚಾಗಿದೆ. ಮತ್ತಷ್ಟು ಎಚ್ಚರಿಕೆ ಅಗತ್ಯ ಇದೆ. ಬೆಂಗಳೂರಿನಲ್ಲೂ ಹಗುರದಿಂದ ಸಾಧಾರಣ ಮಳೆ ಸಂಭವ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜಸಾಗರ ಜಲಾಶಯಕ್ಕೆ ಒಳಹರಿವು ಪ್ರಮಾಣ ಮತ್ತಷ್ಟು ಹೆಚ್ಚಾಗುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಅಣೆಕಟ್ಟೆಯಿಂದ 80 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹೊರಬಿಡಲಾಗುತ್ತಿದೆ. ಕಾವೇರಿ ನದಿ ಪಾತ್ರಕ್ಕೆ ಹಾಗೂ ತಗ್ಗು ಪ್ರದೇಶಗಳಿಗೆ ಭೇಟಿ ನೀಡುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ನದಿ ಪಾತ್ರದಲ್ಲಿ ಮತ್ತು ತಗ್ಗು ಪ್ರದೇಶದಲ್ಲಿರುವ ರೈತರು ಕೃಷಿವಟುಕೆಗಳಿಗೆ ಹೋಗದಂತೆ ಹಾಗೂ ಜಾನುವಾರುಗಳನ್ನು ಬಿಡದಂತೆ ಎಚ್ಚರಿಕೆ ವಹಿಸಬೇಕೆಂದು ಕಾವೇರಿ ನಿಗಮದಿಂದ ಪ್ರಕಟಣೆ ಹೊರಡಿಸಲಾಗಿದೆ.

ಹಾಸನ ಜಿಲ್ಲೆಯ ಶಿರಾಡಿಘಾಟ್ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಈ ಹಿನ್ನೆಲೆ ಹಲವೆಡೆ ಗುಡ್ಡ ಕುಸಿಯುತ್ತಿದೆ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿಯಿಂದ ಗುಡ್ಡ ಕುಸಿಯುತ್ತಿದೆ. ಸಕಲೇಶಪುರ ತಾಲೂಕಿನ ಕಪ್ಪಳ್ಳಿ ಬಳಿ ರಸ್ತೆಗೆ ಅಪಾರ ಪ್ರಮಾಣದ ಮಣ್ಣು ಮತ್ತು ಬೃಹತ್ ಬಂಡೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಶಿರಾಡಿಘಾಟ್‌ನ ರಾಷ್ಟ್ರೀಯ ಹೆದ್ದಾರಿ 75 ಸುರಕ್ಷತೆಗೆ ಸಕಲೇಶಪುರ ತಾಲೂಕಿನ ದೋಣಿಗಲ್ ಬಳಿ ಕಟ್ಟಿದ್ದ ತಡೆಗೋಡೆ ಕುಸಿತಗೊಂಡಿದೆ. ಭಾರಿ ಮಳೆಯಿಂದ ಶಿರಾಡಿಘಾಟ್ ಭಾಗದ ಕಾಫಿ ಬೆಳೆಗಾರರು ಈಗ ಸಂಕಷ್ಟ ಎದುರಿಸುವಂತಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?

ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…

7 hours ago

ಹಲಸಿನಂತೆಯೇ ಕಾಣುವ ಈ ಹಣ್ಣು ನಿಮಗೆ ಗೊತ್ತೇ?

ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್‌…

8 hours ago

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮಹಿಳೆಯರ ಓಟಕ್ಕೆ ಚಿನ್ನದ ಹೊಳಪು – 4×400 ಮೀ. ರಿಲೇಯಲ್ಲಿ ಭರ್ಜರಿ ಗೆಲುವು

ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ 3:29.69 ಸಮಯದೊಂದಿಗೆ ಚಿನ್ನ…

9 hours ago

ಕಾಳುಮೆಣಸು ಮಾರುಕಟ್ಟೆಯಲ್ಲಿ ಏನಾಗುತ್ತಿದೆ?

ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…

18 hours ago

ಹವಾಮಾನ ವರದಿ | 29-09-2026 | ಅ.6 ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ

ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…

19 hours ago

ಕೃಷಿ ವೆಚ್ಚ ಕಡಿಮೆ ಮಾಡಲು ಇಲ್ಲಿ ರೈತರ ಹೊಸ ಹೆಜ್ಜೆ…

ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಚಿತ್ರಕೂಟದ…

23 hours ago