09.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಲ್ಲಿ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆ ಹೆಚ್ಚಿರುವ ಸಾಧ್ಯತೆ ಇದೆ.ಇವತ್ತು ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಬಾಗಲಕೋಟೆ, ವಿಜಯಪುರ, ಗದಗ, ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ದಕ್ಷಿಣ, ಧಾರವಾಡ, ಬೆಳಗಾವಿ, ಚಿಕ್ಕೋಡಿ, ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. ಹಾವೇರಿ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಾವಣಗೆರೆ, ಚಿತ್ರದುರ್ಗ ಉತ್ತರ, ಬಳ್ಳಾರಿ ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಜುಲೈ 9ರಿಂದ ಎರಡು ದಿನಗಳ ಕಾಲ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸ್ವಲ್ಪ ಮಟ್ಟಿಗೆ ಮಳೆ ಕಡಿಮೆಯಾಗುವ ಲಕ್ಷಣಗಳಿವೆ. ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆ ಮುಂದುವರಿಯುವ ಮುನ್ಸೂಚನೆ ಇದೆ.
ಜುಲೈ 11ರಿಂದ ಕರಾವಳಿ, ಮಲೆನಾಡು ಭಾಗಗಳಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಭಾರತವು ವಾರ್ಷಿಕವಾಗಿ ಅಂದಾಜು 1.4 ಮಿಲಿಯನ್ ಟನ್ ಹಲಸಿನ ಹಣ್ಣನ್ನು ಉತ್ಪಾದಿಸುತ್ತದೆ, ಆದರೆ…
Ayanshi K.H, 1st. Std, New Horizon School Bahrain ಅಯಂಶಿ ಕೆಚ್,…
ಒಂದು ಕಡೆ ಅಡಿಕೆ ಬರ್ಮಾ ಅಡಿಕೆ ಅಕ್ರಮವಾಗಿ ಸಾಗಾಟ, ಇನ್ನೊಂದು ಕಡೆ ದೇಶದ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಹಲಸಿನ ಬೀಜ ಚನ್ನ ಬೋಂಡಾಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…
ಎಂ ಜಿ ಸಿದ್ದೇಶ ರಾಮ, 5 ನೇ ತರಗತಿ ಎಂ ಜಿ ಸಿದ್ದೇಶ…