Advertisement
ವೆದರ್ ಮಿರರ್

ಹವಾಮಾನ ವರದಿ | 08-09-2025 | ಸೆ.9 ರಿಂದ ಕೆಲವು ಕಡೆ ಮಳೆ…, ಎಲ್ಲೆಲ್ಲಿ ಮಳೆ ಸಾಧ್ಯತೆ…?

Share

09.09.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಡಿಮೆಯಾಗಿದೆ. ಆದರೆ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಒಂದೆರಡು ಕಡೆ ಸಂಜೆ, ರಾತ್ರಿ ಒಂದೆರಡು ತುಂತುರು ಮಳೆಯ ಸಾಧ್ಯತೆ ಇದೆ.
ಈಗಿನಂತೆ ಮುಂಗಾರು ಮತ್ತಷ್ಟು ದುರ್ಬಲಗೊಂಡಿದ್ದು ಈಗಿನಂತೆ ಸೆಪ್ಟೆಂಬರ್ 9 ಹಾಗೂ 10 ರಂದು ಘಟ್ಟದ ಕೆಳಗಿನ ಪ್ರದೇಶಗಳಲ್ಲಿ, ಅದರಲ್ಲೂ ಸುಬ್ರಹ್ಮಣ್ಯ ಸುತ್ತಮುತ್ತ ಪ್ರದೇಶಗಳಲ್ಲಿ ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯ ಸಾಧ್ಯತೆಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆ ಕಡಿಮೆಯಾದರೂ ಸೆಪ್ಟೆಂಬರ್ 9 ಹಾಗೂ 10 ರಂದು ಕೊಡಗು, ಹಾಸನ ಜಿಲ್ಲೆಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಗಳಿವೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

ಒಳನಾಡು : ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಈಗಿನಂತೆ ಸೆಪ್ಟೆಂಬರ್ 9 ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಗುಜರಾತ್ ಗೆ ತಲಪಿರುವ ವಾಯುಭಾರ ಕುಸಿತವು ನಾಳೆ ಪಾಕಿಸ್ತಾನ ಗಡಿ ದಾಟಲಿದೆ ಮತ್ತು ಶಿಥಿಲಗೊಳ್ಳುವ ಲಕ್ಷಣಗಳಿವೆ. ಸೆಪ್ಟೆಂಬರ್ 13ರಂದು ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ವಾಯುಭಾರ ಕುಸಿತದಂತಹ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಇದರ ಪರಿಣಾಮದಿಂದ ರಾಜ್ಯದ ಉತ್ತರ, ಹಾಗೂ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸೂಚನೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಮಳೆ ಬದಲಾಗಿದೆಯೇ? ಪ್ರಕೃತಿ ಬದಲಾಗಿದೆಯೇ? ಅಥವಾ ನಾವೇ ಬದಲಾಗಿದ್ದೇವೆಯೇ?

ಕಳೆದ ಕೆಲವು ದಶಕಗಳಲ್ಲಿ ಮಳೆಯ ಸಮಯ, ತೀವ್ರತೆ ಮತ್ತು ಹಂಚಿಕೆಯಲ್ಲಿ ಬದಲಾವಣೆ ಕಂಡುಬರುತ್ತಿರುವುದಕ್ಕೆ…

9 minutes ago

ಹವಾಮಾನ ವರದಿ | 28-09-2026 | ಮುಂಗಾರು ಹಿಂದೆ ಸರಿಯುತ್ತಿದ್ದರೂ ಮಳೆ ಇನ್ನೂ ಮುಗಿದಿಲ್ಲ

ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಆರಂಭವಾಗಿದ್ದರೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ ಗುಡುಗು…

2 hours ago

ಸದ್ಯಕ್ಕೆ ರಾಜ್ಯದಲ್ಲಿ ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ- ಸಚಿವ ಜಾರ್ಜ್ ಸ್ಪಷ್ಟನೆ

ಕರ್ನಾಟಕದಲ್ಲಿ ಸದ್ಯಕ್ಕೆ ವಿದ್ಯುತ್ ಲೋಡ್ ಶೆಡ್ಡಿಂಗ್ ಜಾರಿಗೊಳಿಸುವ ಯಾವುದೇ ನಿರ್ಧಾರ ಸರ್ಕಾರದ ಮುಂದಿಲ್ಲ…

2 hours ago

ಸೂಪರ್ ಎಲ್ ನಿನೋ ಆತಂಕ – ಫೆಬ್ರವರಿವರೆಗೆ 4.51 ಲಕ್ಷ ತಾಪಮಾನ ಸಂಬಂಧಿ ಸಾವುಗಳ ಅಂದಾಜು

ಸೂಪರ್ ಎಲ್ ನಿನೋದಿಂದ 2027ರ ಫೆಬ್ರವರಿವರೆಗೆ ಸಾಮಾನ್ಯ ವರ್ಷಕ್ಕಿಂತ 4.51 ಲಕ್ಷ ತಾಪಮಾನ…

2 hours ago

ಬ್ಯಾಂಕ್‌ ಮುಷ್ಕರ ಮುಂದೂಡಿಕೆ – ಇಂದು ಎಂದಿನಂತೆ ಬ್ಯಾಂಕ್‌ ಸೇವೆ

ಸೆ.28ರಿಂದ 30ರವರೆಗೆ ನಡೆಯಬೇಕಿದ್ದ ರಾಷ್ಟ್ರವ್ಯಾಪಿ ಮೂರು ದಿನಗಳ ಬ್ಯಾಂಕ್‌ ಮುಷ್ಕರವನ್ನು ಕೊನೆ ಕ್ಷಣದಲ್ಲಿ…

6 hours ago