03.12.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ರಾತ್ರಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಗಳಿವೆ. ಚಳಿಯ ಪ್ರಮಾಣ ಕಡಿಮೆ ಇರಬಹುದು. ಈಗಿನಂತೆ ದಿತ್ವಾ ಚಂಡಮಾರುತದ ಪ್ರಭಾವದಿಂದ ಹಿಂಗಾರು ಚುರುಕಾಗಿದ್ದು, ಡಿಸೆಂಬರ್ 6ರ ತನಕ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಮಲೆನಾಡು : ಕೊಡಗು ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ ಇದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಒಣ ಹವೆ ಮುಂದುವರಿಯಲಿದೆ. ಈಗಿನಂತೆ ಡಿಸೆಂಬರ್ 3ರಿಂದ ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಹಲವು ಭಾಗಗಳಲ್ಲಿ ಹಾಗೂ ಶಿವಮೊಗ್ಗ ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆ ಆರಂಭವಾಗುವ ಮುನ್ಸೂಚನೆ ಇದೆ. ಡಿಸೆಂಬರ್ 6ರ ತನಕ ಮಳೆ ಮುಂದುವರಿಯಬಹುದು.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಈಗಿನಂತೆ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಗದಗ, ವಿಜಯನಗರ, ಬಳ್ಳಾರಿ, ಕೊಪ್ಪಳ, ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಗಳಲ್ಲಿ ಉತ್ತರ ಭಾರತದ ಕಡೆಯಿಂದ ಬೀಸುತ್ತಿರುವ ಗಾಳಿಯ ಕಾರಣದಿಂದ ಒಣ ಹವೆ ಮುಂದುವರಿಯಲಿದೆ. ಚಳಿ ಸ್ವಲ್ಪ ಕಡಿಮೆ ಇರಬಹುದು.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಸಂಜೆ, ರಾತ್ರಿ ಮೋಡದ ವಾತಾವರಣದ ಜೊತೆಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಡಿಸೆಂಬರ್ 5ರ ತನಕ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ದಿತ್ವಾ ಚಂಡಮಾರುತದ ಪರಿಣಾಮದಿಂದ ರಾಜ್ಯದಲ್ಲಿ ಹಿಂಗಾರು ಸ್ವಲ್ಪ ಮಟ್ಟಿಗೆ ಚುರುಕಾಗಿದ್ದರೂ, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಉತ್ತರ ಭಾರತದ ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಭಾವ ಹೆಚ್ಚಿರುವುದರಿಂದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಿದೆ. ದಿತ್ವಾ ಚಂಡಮಾರುತವು ಡಿಸೆಂಬರ್ 3ರಂದು ತಮಿಳುನಾಡಿನ ಮಹಾಬಲಿಪುರಂ ಕರಾವಳಿಯಲ್ಲಿ ಸಂಪೂರ್ಣ ಶಿಥಿಲಗೊಳ್ಳುವ ಲಕ್ಷಣಗಳಿವೆ.
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ…
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…