Advertisement
ವೆದರ್ ಮಿರರ್

ಹವಾಮಾನ ವರದಿ | 02-12-2025 | ಕೆಲವು ಕಡೆ ಮಳೆ -ಕೆಲವು ಕಡೆ ಒಣ ಹವೆ

Share

03.12.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ರಾತ್ರಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಗಳಿವೆ. ಚಳಿಯ ಪ್ರಮಾಣ ಕಡಿಮೆ ಇರಬಹುದು. ಈಗಿನಂತೆ ದಿತ್ವಾ ಚಂಡಮಾರುತದ ಪ್ರಭಾವದಿಂದ ಹಿಂಗಾರು ಚುರುಕಾಗಿದ್ದು, ಡಿಸೆಂಬರ್ 6ರ ತನಕ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಮಲೆನಾಡು : ಕೊಡಗು ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ ಇದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಒಣ ಹವೆ ಮುಂದುವರಿಯಲಿದೆ. ಈಗಿನಂತೆ ಡಿಸೆಂಬರ್ 3ರಿಂದ ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಹಲವು ಭಾಗಗಳಲ್ಲಿ ಹಾಗೂ ಶಿವಮೊಗ್ಗ ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆ ಆರಂಭವಾಗುವ ಮುನ್ಸೂಚನೆ ಇದೆ. ಡಿಸೆಂಬರ್ 6ರ ತನಕ ಮಳೆ ಮುಂದುವರಿಯಬಹುದು.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಈಗಿನಂತೆ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಗದಗ, ವಿಜಯನಗರ, ಬಳ್ಳಾರಿ, ಕೊಪ್ಪಳ, ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಗಳಲ್ಲಿ ಉತ್ತರ ಭಾರತದ ಕಡೆಯಿಂದ ಬೀಸುತ್ತಿರುವ ಗಾಳಿಯ ಕಾರಣದಿಂದ ಒಣ ಹವೆ ಮುಂದುವರಿಯಲಿದೆ. ಚಳಿ ಸ್ವಲ್ಪ ಕಡಿಮೆ ಇರಬಹುದು.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಸಂಜೆ, ರಾತ್ರಿ ಮೋಡದ ವಾತಾವರಣದ ಜೊತೆಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಡಿಸೆಂಬರ್ 5ರ ತನಕ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ದಿತ್ವಾ ಚಂಡಮಾರುತದ ಪರಿಣಾಮದಿಂದ ರಾಜ್ಯದಲ್ಲಿ ಹಿಂಗಾರು ಸ್ವಲ್ಪ ಮಟ್ಟಿಗೆ ಚುರುಕಾಗಿದ್ದರೂ, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಉತ್ತರ ಭಾರತದ ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಭಾವ ಹೆಚ್ಚಿರುವುದರಿಂದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಿದೆ. ದಿತ್ವಾ ಚಂಡಮಾರುತವು ಡಿಸೆಂಬರ್ 3ರಂದು ತಮಿಳುನಾಡಿನ ಮಹಾಬಲಿಪುರಂ ಕರಾವಳಿಯಲ್ಲಿ ಸಂಪೂರ್ಣ ಶಿಥಿಲಗೊಳ್ಳುವ ಲಕ್ಷಣಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಸುಬ್ರಾಯ ಚೊಕ್ಕಾಡಿ ಅವರಿಗೆ ‘ಮೋಹನ ಮುರಳಿ ಕವಿಸಮ್ಮಾನ’ ಪ್ರದಾನ

ಸುಳ್ಯ ಸಮೀಪದ ಬೊಕ್ಕಾಡಿಯಲ್ಲಿ ನವೆಂಬರ್ 22ರಂದು ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರಿಗೆ…

1 day ago

ಕಲ್ಮಡ್ಕದಲ್ಲೂ ಶುರುವಾಯಿತು ಸ್ವಚ್ಛತಾ ಆಂದೋಲನ – ಯುವಶಕ್ತಿಗೆ ಗ್ರಾಮಸ್ಥರ ಸಾಥ್!

ಸುಳ್ಯ ತಾಲೂಕಿನ ಅಮರಮುಡ್ನೂರಿನಲ್ಲಿ ಆರಂಭವಾದ ಸ್ವಚ್ಛತಾ ಅಭಿಯಾನ ಇದೀಗ ಪಕ್ಕದ ಕಲ್ಮಡ್ಕ ಗ್ರಾಮಕ್ಕೂ…

1 day ago

ಹವಾಮಾನ ವರದಿ | 22.11.2026 | ನವೆಂಬರ್ 23ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ | ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಿಗೆ ಹಿಂಗಾರು ಮಳೆ ಮುನ್ಸೂಚನೆ

ಕಾಸರಗೋಡು ಸೇರಿದಂತೆ ಕರ್ನಾಟಕದಾದ್ಯಂತ ನವೆಂಬರ್ 22ರವರೆಗೆ ಒಣ ಹವೆ ಮುಂದುವರಿಯುವ ಸಾಧ್ಯತೆಯಿದೆ. ಅಕ್ವಾನ್…

1 day ago

ಎಲ್‌ಕೆಜಿಯಿಂದ 12ನೇ ತರಗತಿವರೆಗೆ ಉಚಿತ ನೋಟ್‌ಬುಕ್ – ಮುಂದಿನ ಶೈಕ್ಷಣಿಕ ವರ್ಷದಿಂದ ಜಾರಿ

ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಸರ್ಕಾರಿ ಶಾಲೆಗಳ ಎಲ್‌ಕೆಜಿಯಿಂದ 12ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ…

2 days ago

ಗ್ರಾಮೀಣಾಭಿವೃದ್ಧಿಗೆ ₹16 ಸಾವಿರ ಕೋಟಿ ಯೋಜನೆ – 15 ಲಕ್ಷ ನಿವೇಶನ ಹಂಚಿಕೆ ಗುರಿ

ರಾಜ್ಯದ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗಾಗಿ ₹16 ಸಾವಿರ ಕೋಟಿ ಮೊತ್ತದ ಯೋಜನೆಗಳಿಗೆ ಚಾಲನೆ…

2 days ago

ನವೆಂಬರ್ 24 ರಿಂದ 26 ರವರೆಗೆ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಒಣ ಹವೆ ಮತ್ತು ಬಿಸಿಲು ಮುಂದುವರಿಯುವ ನಿರೀಕ್ಷೆಯಿದ್ದು, ರಾತ್ರಿ ಹಾಗೂ ಮುಂಜಾನೆ…

2 days ago