ಹವಾಮಾನ ವರದಿ | 19-10-2025 | ಗುಡುಗು ಮಳೆ | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ – ಉತ್ತಮ ಮಳೆ ಸಾಧ್ಯತೆ |

October 19, 2025
3:26 PM
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಅಕ್ಟೊಬರ್ 22ರಂದು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ.

20.10.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮುಂದಿನ 10 ದಿನಗಳವರೆಗೂ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಮಲೆನಾಡು : ಕೊಡಗು, ಹಾಸನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಾಗೂ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮುಂದಿನ 10 ದಿನಗಳವರೆಗೂ ಮಳೆಯ ಮುನ್ಸೂಚನೆ ಇದೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯ ಒಂದೆರಡು ಕಡೆ, ಧಾರವಾಡ, ಹಾವೇರಿ, ಗದಗ, ವಿಜಯನಗರ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.  ಈಗಿನಂತೆ ಉತ್ತರ ಒಳನಾಡಿನಲ್ಲಿ ಅಲ್ಲಲ್ಲಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಮುನ್ಸೂಚನೆ ಇದೆ.

ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಅಕ್ಟೊಬರ್ 22ರಂದು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. ಈಗಿನ ಲೆಕ್ಕಾಚಾರದಂತೆ ಅಕ್ಟೊಬರ್ 25 ಅಥವಾ 26 ರಂದು ಈ ವಾಯುಭಾರ ಕುಸಿತವು ಚಂಡಮಾರುತವಾಗಿ ಪರಿವರ್ತನೆಗೊಂಡು, ತಮಿಳುನಾಡು ಕರಾವಳಿ ಮೂಲಕ ಪ್ರವೇಶಿಸುವ ಸಾಧ್ಯತೆಗಳಿವೆ. ಇದರ ಪರಿಣಾಮದಿಂದ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಉತ್ತಮ ಮಳೆಯಾಗುವ ಲಕ್ಷಣಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ
September 14, 2026
8:21 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ
September 13, 2026
9:08 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?
September 13, 2026
12:16 PM
by: ಸಾಯಿಶೇಖರ್ ಕರಿಕಳ
ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು
September 13, 2026
8:13 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror