20.10.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮುಂದಿನ 10 ದಿನಗಳವರೆಗೂ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಮಲೆನಾಡು : ಕೊಡಗು, ಹಾಸನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಾಗೂ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮುಂದಿನ 10 ದಿನಗಳವರೆಗೂ ಮಳೆಯ ಮುನ್ಸೂಚನೆ ಇದೆ.
ಒಳನಾಡು : ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯ ಒಂದೆರಡು ಕಡೆ, ಧಾರವಾಡ, ಹಾವೇರಿ, ಗದಗ, ವಿಜಯನಗರ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಉತ್ತರ ಒಳನಾಡಿನಲ್ಲಿ ಅಲ್ಲಲ್ಲಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಮುನ್ಸೂಚನೆ ಇದೆ.
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಅಕ್ಟೊಬರ್ 22ರಂದು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. ಈಗಿನ ಲೆಕ್ಕಾಚಾರದಂತೆ ಅಕ್ಟೊಬರ್ 25 ಅಥವಾ 26 ರಂದು ಈ ವಾಯುಭಾರ ಕುಸಿತವು ಚಂಡಮಾರುತವಾಗಿ ಪರಿವರ್ತನೆಗೊಂಡು, ತಮಿಳುನಾಡು ಕರಾವಳಿ ಮೂಲಕ ಪ್ರವೇಶಿಸುವ ಸಾಧ್ಯತೆಗಳಿವೆ. ಇದರ ಪರಿಣಾಮದಿಂದ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಉತ್ತಮ ಮಳೆಯಾಗುವ ಲಕ್ಷಣಗಳಿವೆ.
ಅಡಿಕೆ ತೋಟಗಳಲ್ಲಿ ಹೂಗೊಂಚಲುಗಳು ಅರಳಿದರೂ ಕಾಯಿ ಕಟ್ಟದಿರುವುದಕ್ಕೆ ರೈತರು ಬಳಸುವ ಬೇವಿನ ಎಣ್ಣೆಯೇ…
ಕಳಪೆ ಗುಣಮಟ್ಟದ ಅಡಿಕೆ ಸಾಗಣೆ ಪ್ರಕರಣ ಪತ್ತೆಯಾಗಿದ್ದು, ಆಹಾರ ಸುರಕ್ಷತೆ ಮತ್ತು ಮಾನದಂಡಗಳ…
ಕಾಸರಗೋಡು CPCRI ತನ್ನ 110ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜನರೇಷನ್ Z ಗಾಗಿ…
ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…
ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾನ್ ಅವರು…