28.03.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಗುಡುಗು ಸಹಿತ ಒಂದೆರಡು ಕಡೆ ಸಂಜೆ, ರಾತ್ರಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಡುಪಿಯ ಕಾರ್ಕಳ ಸುತ್ತಮುತ್ತ ಗುಡುಗು ಹಾಗೂ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಎಪ್ರಿಲ್ 3ರಿಂದ ಮತ್ತೆ ಮಳೆ ಹೆಚ್ಚಾಗುವ ಲಕ್ಷಣಗಳಿವೆ.
ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನದ ಕರಾವಳಿ ಜಿಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಕಡೆ ಗುಡುಗಿನೊಂದಿಗೆ ತುಂತುರು ಮಳೆ, ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಶೃಂಗೇರಿ, ಕುದುರೆಮುಖ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಸಾಧ್ಯತೆ ಇದೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಎಪ್ರಿಲ್ 3 ರಿಂದ ಮತ್ತೆ ಚುರುಕಾಗುವ ಲಕ್ಷಣಗಳಿವೆ.
ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. ದಕ್ಷಿಣ ಒಳನಾಡಿನ ಚಾಮರಾಜನಗರದ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಎಪ್ರಿಲ್ 3ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಗಳಿವೆ.