ಹವಾಮಾನ ವರದಿ | 27-03-2025 | ಕೆಲವು ಕಡೆ ಗುಡುಗು ಸಹಿತ ಮಳೆ | ಎ.3 ರಿಂದ ಮತ್ತೆ ಮಳೆ ಸಾಧ್ಯತೆ |

March 27, 2025
2:20 PM
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಗುಡುಗು ಸಹಿತ ಒಂದೆರಡು ಕಡೆ ಸಂಜೆ, ರಾತ್ರಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.ಕೊಡಗು ಜಿಲ್ಲೆಯ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನದ ಕರಾವಳಿ ಜಿಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಕಡೆ ಗುಡುಗಿನೊಂದಿಗೆ ತುಂತುರು ಮಳೆ ಇದೆ. ಈಗಿನಂತೆ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಎಪ್ರಿಲ್ 3 ರಿಂದ ಮತ್ತೆ ಚುರುಕಾಗುವ ಲಕ್ಷಣಗಳಿವೆ.

28.03.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಗುಡುಗು ಸಹಿತ ಒಂದೆರಡು ಕಡೆ ಸಂಜೆ, ರಾತ್ರಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಡುಪಿಯ ಕಾರ್ಕಳ ಸುತ್ತಮುತ್ತ ಗುಡುಗು ಹಾಗೂ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಎಪ್ರಿಲ್ 3ರಿಂದ ಮತ್ತೆ ಮಳೆ ಹೆಚ್ಚಾಗುವ ಲಕ್ಷಣಗಳಿವೆ.

ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನದ ಕರಾವಳಿ ಜಿಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಕಡೆ ಗುಡುಗಿನೊಂದಿಗೆ ತುಂತುರು ಮಳೆ, ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಶೃಂಗೇರಿ, ಕುದುರೆಮುಖ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಸಾಧ್ಯತೆ ಇದೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಎಪ್ರಿಲ್ 3 ರಿಂದ ಮತ್ತೆ ಚುರುಕಾಗುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. ದಕ್ಷಿಣ ಒಳನಾಡಿನ ಚಾಮರಾಜನಗರದ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಎಪ್ರಿಲ್ 3ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 24-09-2026 | ಸೆ.29ರಿಂದ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ
September 24, 2026
1:40 PM
by: ಸಾಯಿಶೇಖರ್ ಕರಿಕಳ
ತ್ರಿಪುರಾದಲ್ಲಿ ರಬ್ಬರ್‌ ಏಕಬೆಳೆ ಕೃಷಿಗೆ ಬ್ರೇಕ್‌? ಹೆಬ್ಬೇವು, ಅಗ್ರೋಫಾರೆಸ್ಟ್ರಿಯತ್ತ ಗಮನ
September 24, 2026
7:23 AM
by: ದ ರೂರಲ್ ಮಿರರ್.ಕಾಂ
ವಿಶ್ವದ ಶೇ.79ರಷ್ಟು ನದಿಗಳಲ್ಲಿ ಆಮ್ಲಜನಕ ಕುಸಿತ- ಉಷ್ಣವಲಯದ ನದಿಗಳಿಗೆ ಹೆಚ್ಚು ಅಪಾಯ
September 23, 2026
9:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-09-2026 | ಸೆ.30 ರಿಂದ ಮತ್ತೆ ಬದಲಾಗಲಿದೆ ಹವಾಮಾನ..!
September 23, 2026
1:58 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror