ಹವಾಮಾನ ವರದಿ | 12-04-2025 | ಅಲ್ಲಲ್ಲಿ ಗುಡುಗಿನೊಂದಿಗೆ ಸಾಮಾನ್ಯ ಮಳೆ ಸಾಧ್ಯತೆ | ಎ.13 ರಿಂದ ಮಳೆಯ ಪ್ರಮಾಣ ಕಡಿಮೆ

April 12, 2025
1:50 PM
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶ ಸೇರಿದಂತೆ ಅಲ್ಲಲ್ಲಿ ಗುಡುಗಿನೊಂದಿಗೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಈಗಿನಂತೆ ಎಪ್ರಿಲ್ 13ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.

13.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗಿನೊಂದಿಗೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಆದರೆ ಅರಬ್ಬಿ ಸಮುದ್ರ ಕಡೆಯಿಂದ ಬೀಸುವ ಗಾಳಿಯ ಪ್ರಭಾವ ಹೆಚ್ಚಿರುವುದರಿಂದ ಮೋಡಗಳು ಪೂರ್ವಕ್ಕೆ ಅಂದರೆ ಒಳನಾಡು ಕಡೆ ಚಲಿಸುತ್ತಿದೆ. ಮುನ್ಸೂಚನೆ ಇದ್ದರೂ ಮಳೆಯ ಸಾಧ್ಯತೆ ಕಡಿಮೆ ಇರಬಹುದು. ಚಲಿಸುವ ಮೋಡಗಳಿಂದ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ ಎಪ್ರಿಲ್ 13ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.

ಮಲೆನಾಡು : ಕೊಡಗು ಅಲ್ಲಲ್ಲಿ ಸಾಮಾನ್ಯ, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಎಪ್ರಿಲ್ 13ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆಗಳಿವೆ.…..ಮುಂದೆ ಓದಿ….

ಕೃಷಿ -ಗ್ರಾಮೀಣ -ಪರಿಸರ ಸುದ್ದಿಗೆ ಆದ್ಯತೆ ನೀಡುವ ನಮ್ಮ The Rural Mirror ಡಿಜಿಟಲ್‌ ಮೀಡಿಯಾದ WhatsApp Channel ಗೆ ಸೇರಲು ಇಲ್ಲಿ ಕ್ಲಿಕ್‌ ಮಾಡಿ…

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ದಾವಣಗೆರೆ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಗಾಳಿಯ ಒತ್ತಡ ಹೆಚ್ಚಿದ್ದರೆ ಬಳ್ಳಾರಿ ಜಿಲ್ಲೆಯಲ್ಲೂ ಮಳೆ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಎಪ್ರಿಲ್ 13ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆ ಕ್ಷೀಣಿಸುವ ಲಕ್ಷಣಗಳಿವೆ.

ಈಗಿನ ವರದಿಯಂತೆ ಲಾನಿನಾ ಅವಧಿ ಮುಕ್ತಾಯದ ಹಂತದಲ್ಲಿದೆ. ಪೆಸಿಫಿಕ್ ಸಾಗರದ ಮೇಲ್ಮೈ ಉಷ್ಣತೆ ತೀರ ಬಿಸಿಯೂ ಅಲ್ಲ ಅಥವಾ ತೀರ ತಣ್ಣನೆಯೂ ಅಲ್ಲದ ತಟಸ್ಥ ಸ್ಥಿತಿಗೆ ತಲಪುವ ನಿರೀಕ್ಷೆಯಿದೆ. ಇದರಿಂದ 2025ನೇ ಸಾಲಿನ ನಮ್ಮ ಮುಂಗಾರು ಸಾಮಾನ್ಯವಿರುವ ಸಾಧ್ಯತೆ ಇದೆ.

2025 ಮುಂಗಾರು ಮಳೆ | ಸಾಮಾನ್ಯವಾಗಿರಲಿದೆ ಈ ಬಾರಿಯ ಮುಂಗಾರು |

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ
September 20, 2026
3:13 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ
September 20, 2026
10:43 AM
by: ದ ರೂರಲ್ ಮಿರರ್.ಕಾಂ
ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ
September 19, 2026
12:06 PM
by: ದ ರೂರಲ್ ಮಿರರ್.ಕಾಂ
ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು
September 19, 2026
11:28 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror