ಹವಾಮಾನ ವರದಿ | 20-04-2025 | ಕೆಲವು ಕಡೆ ಸಾಮಾನ್ಯ ಮಳೆ ಸಾಧ್ಯತೆ | ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೂ ಮಳೆ ನಿರೀಕ್ಷೆ

April 20, 2025
5:30 PM
ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆಗಳು ಗೋಚರಿಸುತ್ತಿವೆ. ಒಳನಾಡಿನಲ್ಲಿ ಎಪ್ರಿಲ್ 21ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಎಪ್ರಿಲ್ 25ರಿಂದ ಮತ್ತೆ ಮಳೆಯ ಮುನ್ಸೂಚನೆ ಇದೆ.

21.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದೊಂದಿಗೆ ಸಂಜೆ, ರಾತ್ರಿ, ಮುಂಜಾನೆ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ( ಇವತ್ತು ಮುಂಜಾನೆ ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯಾಗಿದೆ). ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆಗಳು ಗೋಚರಿಸುತ್ತಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ, ಮುಂಜಾನೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಶಿವಮೊಗ್ಗ ಜಿಲ್ಲೆಯ ಶಿವಮೊಗ್ಗ ಸುತ್ತಮುತ್ತ ಸಂಜೆ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮುಂದಿನ 10 ದಿನಗಳವರೆಗೂ ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಬಳ್ಳಾರಿ ಜಿಲ್ಲೆಯ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ ದಾವಣಗೆರೆಯ ಒಂದೆರಡು ಕಡೆಯೂ ಮಳೆಯ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ದಕ್ಷಿಣ ಒಳನಾಡಿನ ಚಿತ್ರದುರ್ಗ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಬೆಂಗಳೂರು, ರಾಮನಗರ, ಮಂಡ್ಯ, ಚಾಮರಾಜನಗರ, ಮೈಸೂರು ಜಿಲ್ಲೆಗಳ ಒಂದೆರಡು ಕಡೆ ಗುಡುಗು ಸಹಿತ ಸಂಜೆ, ರಾತ್ರಿ ವೇಳೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಎಪ್ರಿಲ್ 21ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಎಪ್ರಿಲ್ 25ರಿಂದ ಮತ್ತೆ ಮಳೆಯ ಮುನ್ಸೂಚನೆ ಇದೆ.

ಅರಬ್ಬಿ ಸಮುದ್ರದ ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಭಾವ ಕಡಿಮೆಯಾಗುತ್ತಿದ್ದು, ಬಂಗಾಳಕೊಲ್ಲಿಯ ಕಡೆಯಿಂದ ಅಂದರೆ ಪೂರ್ವ ದಿಕ್ಕಿನಿಂದ ಬೀಸುವ ಗಾಳಿಯ ಪ್ರಭಾವ ಹೆಚ್ಚಾಗುವ ಲಕ್ಷಣಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ
ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ
October 13, 2026
9:55 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror