ಹವಾಮಾನ ವರದಿ | 01-09-2025 | ಕರಾವಳಿ ಜಿಲ್ಲೆಗಳಲ್ಲಿ ಸೆ.7 , ಉಳಿದ ಕಡೆ ಸೆ.5 ರವರೆಗೆ ಮಳೆ

September 1, 2025
2:09 PM
ಬಂಗಾಳಕೊಲ್ಲಿಯ ಥೈಲ್ಯಾಂಡ್ ಉತ್ತರ ಭಾಗದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತವು ಬಂಗಾಳಕೂಲ್ಲಿಯಲ್ಲಿ ಪಶ್ಚಿಮಾಭಿಮುಖವಾಗಿ ಚಲಿಸಿ ಸೆಪ್ಟೆಂಬರ್ 2 ರಂದು ಪಶ್ಚಿಮ ಬಂಗಾಳ ಅಥವಾ ಒಡಿಸ್ಸಾ ಕರಾವಳಿಗೆ ತಲಪುವ ನಿರೀಕ್ಷೆಯಿದೆ. ಇದರ ಪರಿಣಾಮದಿಂದ ಮುಂಗಾರು ಚುರುಕುಗೊಂಡು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಗಳಿವೆ.

02.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಮಧ್ಯ ಅಲ್ಲಲ್ಲಿ ಸಣ್ಣ ಅವಧಿಯ ಬಿಸಿಲು ಸಹ ಇರಬಹುದು. ಈಗಿನಂತೆ ಸೆಪ್ಟೆಂಬರ್ 2 ರಿಂದ ಮಳೆ ಸ್ವಲ್ಪ ಬಿರುಸು ಪಡೆಯುವ ಮುನ್ಸೂಚನೆ ಇದೆ. ಸೆಪ್ಟೆಂಬರ್ 7 ರ ತನಕ ಈ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸ್ವಲ್ಪ ಹೆಚ್ಚಿರಬಹುದು. ಈಗಿನಂತೆ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳನ್ನು ಹೊರತುಪಡಿಸಿ ಉಳಿದ ಭಾಗಗಳಲ್ಲಿ ಸೆಪ್ಟೆಂಬರ್ 5 ರಿಂದ ಮಳೆ ಕಡಿಮೆಯಾಗುವ ಸೂಚನೆಗಳಿವೆ.

ಒಳನಾಡು : ಉತ್ತರ ಒಳನಾಡಿನ ದಾವಣಗೆರೆ, ವಿಜಯನಗರ, ಬಳ್ಳಾರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಹಾಗೂ ಅಲ್ಲಲ್ಲಿ ತುಂತುರು ಮಳೆ ಇರಬಹುದು. ( ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ).  ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಗುಡುಗು ಸಹ ಇರಬಹುದು.

ಬಂಗಾಳಕೊಲ್ಲಿಯ ಥೈಲ್ಯಾಂಡ್ ಉತ್ತರ ಭಾಗದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತವು ಬಂಗಾಳಕೂಲ್ಲಿಯಲ್ಲಿ ಪಶ್ಚಿಮಾಭಿಮುಖವಾಗಿ ಚಲಿಸಿ ಸೆಪ್ಟೆಂಬರ್ 2 ರಂದು ಪಶ್ಚಿಮ ಬಂಗಾಳ ಅಥವಾ ಒಡಿಸ್ಸಾ ಕರಾವಳಿಗೆ ತಲಪುವ ನಿರೀಕ್ಷೆಯಿದೆ. ಇದರ ಪರಿಣಾಮದಿಂದ ಮುಂಗಾರು ಚುರುಕುಗೊಂಡು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…. 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ
August 25, 2026
1:40 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?
August 25, 2026
1:04 PM
by: ಸಾಯಿಶೇಖರ್ ಕರಿಕಳ
ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!
August 25, 2026
12:13 PM
by: ದ ರೂರಲ್ ಮಿರರ್.ಕಾಂ
ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ
August 25, 2026
10:38 AM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror