Advertisement
ವೆದರ್ ಮಿರರ್

ಹವಾಮಾನ ವರದಿ | 11-09-2025 | ವಾಯುಭಾರ ಕುಸಿತದ ಪರಿಣಾಮದಿಂದ ಮಳೆ ಎಲ್ಲಿ..?

Share

12.09.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. ಈಗಿನಂತೆ ಸೆಪ್ಟೆಂಬರ್ 13 ರಿಂದ 19 ರ ತನಕ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಸಾಧ್ಯತೆಗಳು ಗೋಚರಿಸುತ್ತಿವೆ. ವಾಯುಭಾರ ಕುಸಿತದ ಪರಿಣಾಮದಿಂದ ಮುಂಗಾರು ಸ್ವಲ್ಪ ಮಟ್ಟಿಗೆ ಚುರುಕಾಗುವ ಲಕ್ಷಣಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ. ಮಳೆಯ ಸಾಧ್ಯತೆ ಕಡಿಮೆಯಾಗಿದೆ. ಈಗಿನಂತೆ ಸೆಪ್ಟೆಂಬರ್ 14 ರಿಂದ 18ರ ತನಕ ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಗಳಿವೆ. ನಂತರ ದಿನದ ಹೆಚ್ಚಿನ ಅವಧಿ ಬಿಸಿಲು ಇರಬಹುದು ಕೊಡಗು ಜಿಲ್ಲೆಯಲ್ಲಿ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ವಾಯುಭಾರ ಕುಸಿತದ ಪರಿಣಾಮದಿಂದ ಉತ್ತಮ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ (ಕೊಳ್ಳೇಗಾಲ ಭಾಗಗಳಲ್ಲಿ), ರಾಮನಗರ ಬೆಂಗಳೂರು ಗ್ರಾಮಾಂತರ ಹಾಗೂ ನಗರ ಜಿಲ್ಲೆಗಳ ಅಲ್ಲಲ್ಲಿ ರಾತ್ರಿ, ಮುಂಜಾನೆ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ಉತ್ತರ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 20 ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ. ಮಧ್ಯ ಒಂದೆರಡು ದಿನಗಳಲ್ಲಿ ಕಡಿಮೆ ಇರಬಹುದು. ದಕ್ಷಿಣ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 13ರ ತನಕ ಅಲ್ಲಲ್ಲಿ ಮಳೆ ಮುಂದುವರಿಯುವ ಸೂಚನೆಗಳಿವೆ.

ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ರಾಜ್ಯದ ಉತ್ತರ ಒಳನಾಡು, ಮಹಾರಾಷ್ಟ್ರ ಮೂಲಕ ಸಾಗಿ ಸೆಪ್ಟೆಂಬರ್ 15ರಂದು ಮಹಾರಾಷ್ಟ್ರ ಕರಾವಳಿ ಮೂಲಕ ಅರಬ್ಬಿ ಸಮುದ್ರ ಸೇರುವ ನಿರೀಕ್ಷೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

8 hours ago

ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!

ಕಚ್ಚಾ ಗೋಡಂಬಿಯ ದೊಡ್ಡ ಭಾಗವನ್ನು ವಿದೇಶಗಳಿಂದ ಆಮದು ಮಾಡಿಕೊಂಡರೂ, ಸಂಸ್ಕರಣೆ ಮತ್ತು ಮೌಲ್ಯವರ್ಧನೆಯ…

9 hours ago

ರೇಷನ್ ಕಾರ್ಡ್‌ ಇ-ಕೆವೈಸಿಗೆ ಇನ್ನು ಕ್ಯೂ ಬೇಕಿಲ್ಲ – ಮನೆಯಲ್ಲೇ ಇ-ಕೆವೈಸಿಗೆ ‘ಅನ್ನಸೇವೆ’ ಆ್ಯಪ್‌

ಪಡಿತರ ಚೀಟಿಗೆ ಆಧಾರ್‌ ಆಧಾರಿತ ಇ-ಕೆವೈಸಿ ಮಾಡಲು ಇನ್ನು ನ್ಯಾಯಬೆಲೆ ಅಂಗಡಿಗಳ ಮುಂದೆ…

9 hours ago

ಅಡಿಕೆ ವಹಿವಾಟಿನ ಹಿಂದೆ ಮತ್ತೊಂದು ದೊಡ್ಡ ತನಿಖೆ..? ₹1.3 ಕೋಟಿ ನಗದು ವಶ

ಅಕ್ರಮ ಅಡಿಕೆ ವ್ಯಾಪಾರ, ಕಳ್ಳಸಾಗಣೆ ಹಾಗೂ ಜಿಎಸ್‌ಟಿ ವಂಚನೆ ಆರೋಪದ ತನಿಖೆಯಲ್ಲಿ ಪಶ್ಚಿಮ…

9 hours ago

ಇಂಧನ ಮಾತ್ರವಲ್ಲ, ಕೃಷಿಗೂ ಹೊಸ ಮಾರುಕಟ್ಟೆ: ಎಥೆನಾಲ್‌ ಮಿಶ್ರಣ ಕೃಷಿ ವೈವಿಧ್ಯೀಕರಣಕ್ಕೆ ಹೆಜ್ಜೆ ಎಂದ ಗಡ್ಕರಿ

ಎಥೆನಾಲ್‌ ಮಿಶ್ರಣವು ಕೇವಲ ಇಂಧನ ನೀತಿಯಲ್ಲ, ಕೃಷಿ ಉತ್ಪನ್ನಗಳಿಗೆ ಹೊಸ ಮಾರುಕಟ್ಟೆ ಸೃಷ್ಟಿಸುವ…

10 hours ago

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ

ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…

1 day ago