ಹವಾಮಾನ ವರದಿ | 17-09-2025 | ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ – ಎಲ್ಲೆಲ್ಲಾ ಇರಬಹುದು ಮಳೆ..?

September 17, 2025
3:21 PM

18.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಅರಬ್ಬಿ ಸಮುದ್ರದ ಕಡೆಯಿಂದ ಬೀಸುತ್ತಿರುವ ಗಾಳಿಯ ತೀವ್ರತೆ ಕಡಿಮೆ ಇರುವುದರಿಂದ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಈಗಿನಂತೆ ಸೆಪ್ಟೆಂಬರ್ 19ರಿಂದ ಮಳೆ ಕಡಿಮೆಯಾಗಿ ಅಲ್ಲಲ್ಲಿ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆಯು ಮುಂದಿನ 10 ದಿನಗಳವರೆಗೂ ಇರಬಹುದು.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಸೆಪ್ಟೆಂಬರ್ 19ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಸೂಚನೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.. 

ಒಳನಾಡು : ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ
September 19, 2026
7:20 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ
September 17, 2026
2:14 PM
by: ಸಾಯಿಶೇಖರ್ ಕರಿಕಳ
ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ
September 17, 2026
7:20 AM
by: ದ ರೂರಲ್ ಮಿರರ್.ಕಾಂ
25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು
September 16, 2026
11:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror