ಹವಾಮಾನ ವರದಿ | 25-09-2025 | ಎಲ್ಲೆಲ್ಲಾ ಉತ್ತಮ ಮಳೆ, ಎಲ್ಲೆಲ್ಲಾ ಸಾಮಾನ್ಯ ಮಳೆ..?

September 25, 2025
2:46 PM
ಬಂಗಾಳಕೊಲ್ಲಿಯ ಒಡಿಸ್ಸಾ ಕರಾವಳಿಯಲ್ಲಿ ವಾಯುಭಾರ ಕುಸಿತದಂತಹ ತಿರುಗುವಿಕೆ ಆರಂಭವಾಗಿದ್ದು, 26 ರಂದು ಭೂಪ್ರವೇಶಿಸಿ ಮಧ್ಯಪ್ರದೇಶ ತನಕ ಸಾಗುವ ನಿರೀಕ್ಷೆ ಇದೆ.

26.09.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮಧ್ಯಾಹ್ನ ಹಾಗೂ ನಂತರ ಬಿಟ್ಟು ಬಿಟ್ಟು ಮಳೆಯ ಸಾಧ್ಯತೆಗಳಿವೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಗುಡುಗು ಹೆಚ್ಚಿರಬಹುದು. ಈಗಿನಂತೆ ಸೆಪ್ಟೆಂಬರ್ 28ರ ತನಕ ಇದೇ ವಾತಾವರಣ ಇರಲಿದ್ದು, 29 ರಿಂದ ಅಕ್ಟೊಬರ್ 3 ರ ತನಕ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

ಮಲೆನಾಡು : ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೂ, ತೀರ್ಥಹಳ್ಳಿ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ.
ಈಗಿನಂತೆ ಸೆಪ್ಟೆಂಬರ್ 26 ರಿಂದ ಮಳೆ ಪ್ರಮಾಣ ಕಡಿಮೆಯಾದರೂ (ಶಿವಮೊಗ್ಗ ನಾಳೆಯೂ ಮಳೆಯ ಸಾಧ್ಯತೆ ಇದೆ), ಅಕ್ಟೊಬರ್ 2 ಹಾಗೂ 3ರಂದು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

ಒಳನಾಡು : ಉತ್ತರ ಒಳನಾಡಿನ ಬೀದರ್, ಯಾದಗಿರಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.  ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಮೋಡ ಹಾಗೂ ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.  ಈಗಿನಂತೆ ಸೆಪ್ಟೆಂಬರ್ 26 ಹಾಗೂ 27ರಂದು ಉತ್ತರ ಒಣ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನಲ್ಲಿ 26ರಿಂದ ಮಳೆಯ ಪ್ರಮಾಣವು ಕಡಿಮೆಯಾಗುವ ಸೂಚನೆಗಳಿವೆ.

ಬಂಗಾಳಕೊಲ್ಲಿಯ ಒಡಿಸ್ಸಾ ಕರಾವಳಿಯಲ್ಲಿ ವಾಯುಭಾರ ಕುಸಿತದಂತಹ ತಿರುಗುವಿಕೆ ಆರಂಭವಾಗಿದ್ದು, 26ರಂದು ಭೂಪ್ರವೇಶಿಸಿ ಮಧ್ಯಪ್ರದೇಶ ತನಕ ಸಾಗುವ ನಿರೀಕ್ಷೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ
October 10, 2026
2:55 PM
by: ದ ರೂರಲ್ ಮಿರರ್.ಕಾಂ
ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ
October 10, 2026
2:51 PM
by: ದ ರೂರಲ್ ಮಿರರ್.ಕಾಂ
ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ
October 10, 2026
2:44 PM
by: ದ ರೂರಲ್ ಮಿರರ್.ಕಾಂ
ಉಪ್ಪಿನಂಗಡಿಯ ಮೌಲ್ಯಾಧಾರಿತ ಶಿಕ್ಷಣ ಕ್ರಾಂತಿಯ ಹರಿಕಾರ ಯು.ಜಿ. ರಾಧ ಭಟ್ – ಗ್ರಾಮೀಣ ನೆಲದಲ್ಲಿ ಅರಳಿದ ಶ್ರೀರಾಮ ಶಾಲೆಯ ಯಶೋಗಾಥೆ
October 10, 2026
2:06 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror