26.09.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮಧ್ಯಾಹ್ನ ಹಾಗೂ ನಂತರ ಬಿಟ್ಟು ಬಿಟ್ಟು ಮಳೆಯ ಸಾಧ್ಯತೆಗಳಿವೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಗುಡುಗು ಹೆಚ್ಚಿರಬಹುದು. ಈಗಿನಂತೆ ಸೆಪ್ಟೆಂಬರ್ 28ರ ತನಕ ಇದೇ ವಾತಾವರಣ ಇರಲಿದ್ದು, 29 ರಿಂದ ಅಕ್ಟೊಬರ್ 3 ರ ತನಕ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಮಲೆನಾಡು : ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೂ, ತೀರ್ಥಹಳ್ಳಿ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ.
ಈಗಿನಂತೆ ಸೆಪ್ಟೆಂಬರ್ 26 ರಿಂದ ಮಳೆ ಪ್ರಮಾಣ ಕಡಿಮೆಯಾದರೂ (ಶಿವಮೊಗ್ಗ ನಾಳೆಯೂ ಮಳೆಯ ಸಾಧ್ಯತೆ ಇದೆ), ಅಕ್ಟೊಬರ್ 2 ಹಾಗೂ 3ರಂದು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಒಳನಾಡು : ಉತ್ತರ ಒಳನಾಡಿನ ಬೀದರ್, ಯಾದಗಿರಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಮೋಡ ಹಾಗೂ ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಸೆಪ್ಟೆಂಬರ್ 26 ಹಾಗೂ 27ರಂದು ಉತ್ತರ ಒಣ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನಲ್ಲಿ 26ರಿಂದ ಮಳೆಯ ಪ್ರಮಾಣವು ಕಡಿಮೆಯಾಗುವ ಸೂಚನೆಗಳಿವೆ.
ಬಂಗಾಳಕೊಲ್ಲಿಯ ಒಡಿಸ್ಸಾ ಕರಾವಳಿಯಲ್ಲಿ ವಾಯುಭಾರ ಕುಸಿತದಂತಹ ತಿರುಗುವಿಕೆ ಆರಂಭವಾಗಿದ್ದು, 26ರಂದು ಭೂಪ್ರವೇಶಿಸಿ ಮಧ್ಯಪ್ರದೇಶ ತನಕ ಸಾಗುವ ನಿರೀಕ್ಷೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
12.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…
ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…
ಚೀನಾದ Chinese Academy of Tropical Agricultural Sciences (CATAS) ವಿಜ್ಞಾನಿಗಳು Electron…
ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…
ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…