Advertisement
ಸುದ್ದಿಗಳು

ಹವಾಮಾನ ವರದಿ | 19-04-2025 | ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ

Share

20.04.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಸಂಜೆ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹಾಗೂ ಒತ್ತಡ ಹೆಚ್ಚಿದ್ದರೆ ಕಾಸರಗೋಡು ಜಿಲ್ಲೆಯಲ್ಲೂ ಮತ್ತು ದ. ಕ. ಉಳಿದ ಭಾಗಗಳಲ್ಲಿಯೂ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಉಡುಪಿ ಜಿಲ್ಲೆಯಲ್ಲಿ ಈಗಾಗಲೇ ಮೋಡದ ವಾತಾವರಣ ಉಂಟಾಗಿದ್ದು, ಸಂಜೆ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ ಉಳಿದ ಭಾಗಗಳಲ್ಲಿಯೂ ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಈಗಾಗಲೇ ಮೋಡದ ವಾತಾವರಣ ಇದ್ದು, ಮಳೆಯ ಸಾಧ್ಯತೆಗಳು ಕಡಿಮೆಯಾಗುತ್ತಿದೆ. ಈಗಿನಂತೆ ಕರಾವಳಿ ಭಾಗಗಳಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಮಲೆನಾಡು : ಕೊಡಗಿನ ಬಹುತೇಕ ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಹಾಸನದ ಸಕ್ಲೇಶ್ಪುರ ಸುತ್ತಮುತ್ತ, ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಶೃಂಗೇರಿ, ಕುದುರೆಮುಖ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಸಂಜೆ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಈಗಾಗಲೇ ಮೋಡ ವಾತಾವರಣ ಇದ್ದು, ಗದಗ, ಬಳ್ಳಾರಿ, ದಾವಣಗೆರೆ ಕೊಪ್ಪಳ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಇಲ್ಲಿ ಗಾಳಿಯ ಪಾತ್ರ ಮಹತ್ವದ್ದಾಗಿದೆ. ದಕ್ಷಿಣ ಒಳನಾಡಿನ ಮೈಸೂರು, ಬೆಂಗಳೂರು ಹಗೂ ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ ಇತರ ಭಾಗಗಳಲ್ಲಿಯೂ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಈಗಿನಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

5 hours ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

6 hours ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

22 hours ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

1 day ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

1 day ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

1 day ago