ಹವಾಮಾನ ವರದಿ | 18-11-2025 | ಇನ್ನೊಂದು ಮಳೆಯಾಗುವುದು ಪಕ್ಕಾ….!, ಯಾವಾಗ..? ಕಾರಣ ಏನು..?

November 18, 2025
12:29 PM
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಸುಮಾರು ನವೆಂಬರ್ 25, 26ರಂದು ತಮಿಳುನಾಡು ಅಥವಾ ಆಂದ್ರಾ ಕರಾವಳಿ ಮೂಲಕ ಪ್ರವೇಶಿಸುವ ಲಕ್ಷಣಗಳಿರುವುದರಿಂದ ರಾಜ್ಯದಲ್ಲೂ ನವೆಂಬರ್ 26ರ ನಂತರ ಮಳೆಯಾಗುವ ಸಾಧ್ಯತೆಗಳಿವೆ.

19.11.2025.ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಬಿಸಿಲು ಕಡಿಮೆ ಇದ್ದು, ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ ಅಥವಾ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಹಾಗೂ ಉಡುಪಿ ಕಾರ್ಕಳ ಸುತ್ತಮುತ್ತ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವೆ ಮುಂದುವರಿಯಲಿದೆ. ಈಗಿನಂತೆ ನವೆಂಬರ್ 19 ರಂದು ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ 22ರಿಂದ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಸಾಧ್ಯತೆ ಇದೆ.

ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಸಂಜೆ, ರಾತ್ರಿ ತುಂತುರು ಮಳೆಯ ಮುನ್ಸೂಚನೆ ಇದೆ. ಸಣ್ಣ ಪ್ರಮಾಣದ ಗುಡುಗು ಸಾಧ್ಯತೆಯೂ ಇದೆ. ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಒಣ ಹವೆ ಮುಂದುವರಿಯಲಿದೆ.
ಈಗಿನಂತೆ ನವೆಂಬರ್ 22 ರಿಂದ ಶಿವಮೊಗ್ಗ ಜಿಲ್ಲೆ ಸೇರಿದಂತೆ ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುವ ನಿರೀಕ್ಷೆಗಳಿವೆ. ಆದರೆ ಕೊಡಗು ಜಿಲ್ಲೆಯಲ್ಲಿ ನವೆಂಬರ್ 19ರಿಂದ ಮಳೆ ಆರಂಭವಾಗುವ ಮುನ್ಸೂಚನೆ ಇದೆ.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಈಗಿನಂತೆ ನವೆಂಬರ್ 22 ರಿಂದ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, 23ರಿಂದ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಕೃಷಿ, ಗ್ರಾಮೀಣ, ಪರಿಸರ ಸುದ್ದಿಗಳಿಗಾಗಿ ನಮ್ಮ ಚಾನೆಲ್‌ ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿ…

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಚಾಮರಾಜನಗರ, ರಾಮನಗರ ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಣ್ಣ ಪ್ರಮಾಣದ ಗುಡುಗು ಸಾಧ್ಯತೆಯೂ ಇದೆ. ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ಅನಿರೀಕ್ಷಿತ ತುಂತುರು ಮಳೆಯ ಸಾಧ್ಯತೆಯೂ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಮೋಡ ಹಾಗೂ ಮಳೆಯ ವಾತಾವರಣವು ನವೆಂಬರ್ 25 ರ ತನಕವೂ ಮುಂದುವರಿಯುವ ಸಾಧ್ಯತೆಗಳಿವೆ.

ನವೆಂಬರ್ 21ರಂದು ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಪಶ್ಚಿಮಾಭಿಮುಖವಾಗಿ ಚಲಿಸುವ ಕಾರಣದಿಂದ ಅಷ್ಟೇನು ಪರಿಣಾಮ ಬೀರುವ ಸಾಧ್ಯತೆಗಳಿಲ್ಲ. ಆದರೆ ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಸುಮಾರು ನವೆಂಬರ್ 25, 26ರಂದು ತಮಿಳುನಾಡು ಅಥವಾ ಆಂದ್ರಾ ಕರಾವಳಿ ಮೂಲಕ ಪ್ರವೇಶಿಸುವ ಲಕ್ಷಣಗಳಿರುವುದರಿಂದ ರಾಜ್ಯದಲ್ಲೂ ನವೆಂಬರ್ 26ರ ನಂತರ ಮಳೆಯಾಗುವ ಸಾಧ್ಯತೆಗಳಿವೆ. ಕೃಷಿ, ಗ್ರಾಮೀಣ, ಪರಿಸರ ಸುದ್ದಿಗಳಿಗಾಗಿ ನಮ್ಮ ಚಾನೆಲ್‌ ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿ…

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror