19.11.2025.ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಬಿಸಿಲು ಕಡಿಮೆ ಇದ್ದು, ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ ಅಥವಾ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಹಾಗೂ ಉಡುಪಿ ಕಾರ್ಕಳ ಸುತ್ತಮುತ್ತ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವೆ ಮುಂದುವರಿಯಲಿದೆ. ಈಗಿನಂತೆ ನವೆಂಬರ್ 19 ರಂದು ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ 22ರಿಂದ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಸಾಧ್ಯತೆ ಇದೆ.
ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಸಂಜೆ, ರಾತ್ರಿ ತುಂತುರು ಮಳೆಯ ಮುನ್ಸೂಚನೆ ಇದೆ. ಸಣ್ಣ ಪ್ರಮಾಣದ ಗುಡುಗು ಸಾಧ್ಯತೆಯೂ ಇದೆ. ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಒಣ ಹವೆ ಮುಂದುವರಿಯಲಿದೆ.
ಈಗಿನಂತೆ ನವೆಂಬರ್ 22 ರಿಂದ ಶಿವಮೊಗ್ಗ ಜಿಲ್ಲೆ ಸೇರಿದಂತೆ ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುವ ನಿರೀಕ್ಷೆಗಳಿವೆ. ಆದರೆ ಕೊಡಗು ಜಿಲ್ಲೆಯಲ್ಲಿ ನವೆಂಬರ್ 19ರಿಂದ ಮಳೆ ಆರಂಭವಾಗುವ ಮುನ್ಸೂಚನೆ ಇದೆ.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಈಗಿನಂತೆ ನವೆಂಬರ್ 22 ರಿಂದ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, 23ರಿಂದ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಕೃಷಿ, ಗ್ರಾಮೀಣ, ಪರಿಸರ ಸುದ್ದಿಗಳಿಗಾಗಿ ನಮ್ಮ ಚಾನೆಲ್ ಫಾಲೋ ಮಾಡಲು ಇಲ್ಲಿ ಕ್ಲಿಕ್ ಮಾಡಿ…
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಚಾಮರಾಜನಗರ, ರಾಮನಗರ ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಣ್ಣ ಪ್ರಮಾಣದ ಗುಡುಗು ಸಾಧ್ಯತೆಯೂ ಇದೆ. ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ಅನಿರೀಕ್ಷಿತ ತುಂತುರು ಮಳೆಯ ಸಾಧ್ಯತೆಯೂ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಮೋಡ ಹಾಗೂ ಮಳೆಯ ವಾತಾವರಣವು ನವೆಂಬರ್ 25 ರ ತನಕವೂ ಮುಂದುವರಿಯುವ ಸಾಧ್ಯತೆಗಳಿವೆ.
ನವೆಂಬರ್ 21ರಂದು ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಪಶ್ಚಿಮಾಭಿಮುಖವಾಗಿ ಚಲಿಸುವ ಕಾರಣದಿಂದ ಅಷ್ಟೇನು ಪರಿಣಾಮ ಬೀರುವ ಸಾಧ್ಯತೆಗಳಿಲ್ಲ. ಆದರೆ ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಸುಮಾರು ನವೆಂಬರ್ 25, 26ರಂದು ತಮಿಳುನಾಡು ಅಥವಾ ಆಂದ್ರಾ ಕರಾವಳಿ ಮೂಲಕ ಪ್ರವೇಶಿಸುವ ಲಕ್ಷಣಗಳಿರುವುದರಿಂದ ರಾಜ್ಯದಲ್ಲೂ ನವೆಂಬರ್ 26ರ ನಂತರ ಮಳೆಯಾಗುವ ಸಾಧ್ಯತೆಗಳಿವೆ. ಕೃಷಿ, ಗ್ರಾಮೀಣ, ಪರಿಸರ ಸುದ್ದಿಗಳಿಗಾಗಿ ನಮ್ಮ ಚಾನೆಲ್ ಫಾಲೋ ಮಾಡಲು ಇಲ್ಲಿ ಕ್ಲಿಕ್ ಮಾಡಿ…
ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…
ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಪ್ರಸಕ್ತ ಹಂಗಾಮಿನಲ್ಲಿ ಕಬ್ಬಿನ ಪಾವತಿಯ…
ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ‘ಸೈಕಲ್ ಫಾರ್ ಕಾಫಿ’ ಜಾಥಾ ಆಯೋಜಿಸಲಾಗಿದ್ದು,…
ಏಷ್ಯನ್ ಗೇಮ್ಸ್ ಪುರುಷರ ಕ್ರಿಕೆಟ್ ಫೈನಲ್‌ನಲ್ಲಿ ಅ.3ರಂದು ಭಾರತ ಮತ್ತು ಪಾಕಿಸ್ತಾನ ಚಿನ್ನದ…
ಮಳೆಯ ಕೊರತೆಯಿಂದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುವ ಸಾಧ್ಯತೆ ಹಿನ್ನೆಲೆಯಲ್ಲಿ…
ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…