Advertisement
ಸುದ್ದಿಗಳು

ಹವಾಮಾನ ವರದಿ | 23-10-2025 | ರಾಜ್ಯದಲ್ಲಿ ಅ.28 ರವರೆಗೂ ಮಳೆ ಯಾಕೆ..?

Share

24.10.25ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಮಳೆಯ ಮುನ್ಸೂಚನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಮಳೆ ಹೆಚ್ಚಿರುವ ಮುನ್ಸೂಚನೆ ಇದೆ. ಒಂದೆರಡು ಕಡೆ ಗುಡುಗು ಸಾಧ್ಯತೆಯೂ ಇದೆ.

ಮಲೆನಾಡು : ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಹಾಸನ ಜಿಲ್ಲೆಯಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಗುಡುಗು ಸಾಧ್ಯತೆಯೂ ಇದೆ.

ಉತ್ತರ ಒಳನಾಡು : ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯನಗರ, ದಾವಣಗೆರೆ, ಬಳ್ಳಾರಿ, ವಿಜಯಪುರ, ಕಲಬುರ್ಗಿ, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಕೊಪ್ಪಳ, ರಾಯಚೂರು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ದಕ್ಷಿಣ ಒಳನಾಡು : ಮೈಸೂರು, ಚಾಮರಾಜನಗರ (ಗುಂಡ್ಲುಪೇಟೆ ಸುತ್ತಮುತ್ತ) ಜಿಲ್ಲೆಯಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಚಾಮರಾಜನಗರದ ಕೊಳ್ಳೇಗಾಲ ಸುತ್ತಮುತ್ತ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.

ಬಂಗಾಳಕೊಲ್ಲಿಯ ತಿರುಗುವಿಕೆಯು ಅಕ್ಟೊಬರ್ 24 ರಂದು ವಾಯುಭಾರ ಕುಸಿತವಾಗಿ ಮಾರ್ಪಾಡಾಗುವ ಲಕ್ಷಣಗಳಿವೆ. ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಉತ್ತರಕ್ಕೆ ಚಲಿಸುವ ಸಾಧ್ಯತೆಗಳಿವೆ. ರಾಜ್ಯದಲ್ಲಿ ಅಕ್ಟೊಬರ್ 28 ರ ತನಕವೂ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

4 hours ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

4 hours ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

4 hours ago

ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್

ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…

4 hours ago

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

1 day ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

1 day ago