24.10.25ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಮಳೆಯ ಮುನ್ಸೂಚನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಮಳೆ ಹೆಚ್ಚಿರುವ ಮುನ್ಸೂಚನೆ ಇದೆ. ಒಂದೆರಡು ಕಡೆ ಗುಡುಗು ಸಾಧ್ಯತೆಯೂ ಇದೆ.
ಮಲೆನಾಡು : ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಹಾಸನ ಜಿಲ್ಲೆಯಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಗುಡುಗು ಸಾಧ್ಯತೆಯೂ ಇದೆ.
ಉತ್ತರ ಒಳನಾಡು : ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯನಗರ, ದಾವಣಗೆರೆ, ಬಳ್ಳಾರಿ, ವಿಜಯಪುರ, ಕಲಬುರ್ಗಿ, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಕೊಪ್ಪಳ, ರಾಯಚೂರು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡು : ಮೈಸೂರು, ಚಾಮರಾಜನಗರ (ಗುಂಡ್ಲುಪೇಟೆ ಸುತ್ತಮುತ್ತ) ಜಿಲ್ಲೆಯಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಚಾಮರಾಜನಗರದ ಕೊಳ್ಳೇಗಾಲ ಸುತ್ತಮುತ್ತ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.
ಬಂಗಾಳಕೊಲ್ಲಿಯ ತಿರುಗುವಿಕೆಯು ಅಕ್ಟೊಬರ್ 24 ರಂದು ವಾಯುಭಾರ ಕುಸಿತವಾಗಿ ಮಾರ್ಪಾಡಾಗುವ ಲಕ್ಷಣಗಳಿವೆ. ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಉತ್ತರಕ್ಕೆ ಚಲಿಸುವ ಸಾಧ್ಯತೆಗಳಿವೆ. ರಾಜ್ಯದಲ್ಲಿ ಅಕ್ಟೊಬರ್ 28 ರ ತನಕವೂ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…
ರಾಜ್ಯದಲ್ಲಿ ಸದ್ಯ ಯಾವುದೇ ರೀತಿಯ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ…
2027-28ನೇ ಸಾಲಿನಲ್ಲಿ ನವೋದಯ ವಿದ್ಯಾಲಯಗಳ 9 ಮತ್ತು 11ನೇ ತರಗತಿಯ ಖಾಲಿ ಸ್ಥಾನಗಳಿಗೆ…
1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…
ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…
ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…