ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರ  | ರಾಜ್ಯದ ವಿವಿದೆಡೆ ಮಳೆ

June 9, 2025
9:11 PM

ರಾಜ್ಯದಲ್ಲಿ ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರವಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಸಕ್ರಿಯವಾಗಿದ್ದು, ಕರಾವಳಿಯಲ್ಲಿ ಸಾಮಾನ್ಯವಾಗಿತ್ತು. ಕರಾವಳಿ ಮತ್ತು ಉತ್ತರ ಒಳನಾಡಿನ ಹಲವೆಡೆ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಚಿತ್ರದುರ್ಗ ಜಿಲ್ಲೆಯ ಪರಶುರಾಮ್‌ಪುರದಲ್ಲಿ ಅತೀ ಹೆಚ್ಚು 12 ಸೆಂಟಿ ಮೀಟರ್ ಮಳೆಯಾಗಿದೆ. ಕುಂದಾಪುರ ಮತ್ತು ಯಾದಗಿರಿ ಜಿಲ್ಲೆಯ ಕಕ್ಕೇರಿಯಲ್ಲಿ ತಲಾ 8 ಸೆಂಟಿ ಮೀಟರ್ ಮಳೆಯಾಗಿದೆ. ಇದೇ ವೇಳೆ ಸುತಗಟ್ಟಿ ಮಟ್ಟಿಕೊಪ್ಪ 6, ಸಿಂಧನೂರು, ಧಾರವಾಡ ಮತ್ತು ಬಳಗಾನೂರಿನಲ್ಲಿ ತಲಾ 5 ಸೆಂಟಿ ಮೀಟರ್ ಮಳೆಯಾಗಿದೆ.

ಮುಂದಿನ 3 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಸಂಭವವಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ | ಜುಲೈ 21ರಂದು ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗೆ ನೇರ ಸಂದರ್ಶನ
July 18, 2026
8:59 PM
by: ಮಿರರ್‌ ಡೆಸ್ಕ್
ಜುಲೈ 31 ರೊಳಗೆ ಬೆಳೆವಿಮೆ ನೋಂದಣಿ ಮಾಡಿಸಿಕೊಳ್ಳಿ – ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ಅವಕಾಶ
July 18, 2026
8:10 PM
by: ದ ರೂರಲ್ ಮಿರರ್.ಕಾಂ
ಕರಾವಳಿ–ಹವಾಮಾನ ವರದಿ | 18-07-2026 | ಮಲೆನಾಡಿನಲ್ಲಿ ಇನ್ನೂ 10 ದಿನ ಮಳೆ ಮುಂದುವರಿಕೆ…! ಉತ್ತರ ಒಳನಾಡಿನಲ್ಲಿ ಜುಲೈ 19 ರಿಂದ ಮಳೆ ಇಳಿಮುಖ
July 18, 2026
1:04 PM
by: ಸಾಯಿಶೇಖರ್ ಕರಿಕಳ
ಮಳೆ ಎಚ್ಚರಿಕೆ – ಉಡುಪಿ, ದಕ್ಷಿಣ ಕನ್ನಡ ಸೇರಿ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ, ಗಂಟೆಗೆ 50 ಕಿ.ಮೀ. ವೇಗದ ಗಾಳಿ ಸಾಧ್ಯತೆ
July 18, 2026
8:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror