ರಾಜ್ಯದಲ್ಲಿ ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರವಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಸಕ್ರಿಯವಾಗಿದ್ದು, ಕರಾವಳಿಯಲ್ಲಿ ಸಾಮಾನ್ಯವಾಗಿತ್ತು. ಕರಾವಳಿ ಮತ್ತು ಉತ್ತರ ಒಳನಾಡಿನ ಹಲವೆಡೆ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಚಿತ್ರದುರ್ಗ ಜಿಲ್ಲೆಯ ಪರಶುರಾಮ್‌ಪುರದಲ್ಲಿ ಅತೀ ಹೆಚ್ಚು 12 ಸೆಂಟಿ ಮೀಟರ್ ಮಳೆಯಾಗಿದೆ. ಕುಂದಾಪುರ ಮತ್ತು ಯಾದಗಿರಿ ಜಿಲ್ಲೆಯ ಕಕ್ಕೇರಿಯಲ್ಲಿ ತಲಾ 8 ಸೆಂಟಿ ಮೀಟರ್ ಮಳೆಯಾಗಿದೆ. ಇದೇ ವೇಳೆ ಸುತಗಟ್ಟಿ ಮಟ್ಟಿಕೊಪ್ಪ 6, ಸಿಂಧನೂರು, ಧಾರವಾಡ ಮತ್ತು ಬಳಗಾನೂರಿನಲ್ಲಿ ತಲಾ 5 ಸೆಂಟಿ ಮೀಟರ್ ಮಳೆಯಾಗಿದೆ.
ಮುಂದಿನ 3 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಸಂಭವವಿದೆ.
ದಿಶಾಂತ್ ಕೆ ಎಸ್, 4 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ…
ಪ್ರಣಮ್ಯ ಡಿ, 5 ನೇ ತರಗತಿ, ಕೊಡಿಯಾಲಬೈಲು, ಬೆಳ್ತಂಗಡಿ |- ದ ರೂರಲ್…
ರಾಜ್ಯದಲ್ಲಿನ ಮಳೆ ಮಾಪನ ಯಂತ್ರಗಳ ನಿರ್ವಹಣೆಯಲ್ಲಿನ ಅವ್ಯವಸ್ಥೆಯನ್ನು ಸರಿಪಡಿಸಲು ರಾಜ್ಯ ಸರ್ಕಾರಕ್ಕೆ ಸೂಕ್ತ…
ರಾಜ್ಯದ ಎಲ್ಲಾ ಅರಣ್ಯ ಪ್ರದೇಶದೊಳಗೆ ದನ-ಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸಲು ನಿಯಮಾನುಸಾರ…
ಕೇಂದ್ರ ಪುರಸ್ಕೃತ ಪ್ರಮುಖ ಯೋಜನೆಗಳಲ್ಲಿ ಒಂದಾದ, ರಾಷ್ಟ್ರೀಯ ತೋಟಗಾರಿಕಾ ಮಿಷನ್, ಬರ ಪೀಡಿತ…
ದಾವಣಗೆರೆ ಜಿಲ್ಲೆಯ 216 ಗ್ರಾಮ ಪಂಚಾಯತಿಗಳಲ್ಲಿ ಕೇಂದ್ರ ಸರ್ಕಾರದ ಮಹತ್ವದ ಯೋಜನೆ ಡಿಜಿಟಲ್…