21.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಧ್ಯಾಹ್ನ ನಂತರ ಅಲ್ಲಲ್ಲಿ ಸಣ್ಣ ಪ್ರಮಾಣದ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಸೆಪ್ಟೆಂಬರ್ 23ರಿಂದ 3 ಅಥವಾ 4 ದಿನಗಳ ಕಾಲ ಮಳೆ ಸ್ವಲ್ಪ ಜಾಸ್ತಿಯಾಗುವ ಮುನ್ಸೂಚನೆ ಇದೆ.
ಮಲೆನಾಡು : ಕೊಡಗಿನ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರಿನ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.ಈಗಿನಂತೆ ಸೆಪ್ಟೆಂಬರ್ 23ರಿಂದ ಮಳೆ ಸ್ವಲ್ಪ ಜಾಸ್ತಿ ಇರಬಹುದು.
ಒಳನಾಡು: ರಾಯಚೂರು, ಯಾದಗಿರಿ, ಬೆಳಗಾವಿ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಬೆಂಗಳೂರು ಉತ್ತರ ಹಾಗೂ ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಸೆಪ್ಟೆಂಬರ್ 21ರಿಂದ ಉತ್ತರ ಒಳನಾಡಿನ ಭಾಗಗಳ ಹೆಚ್ಚಿನ ಪ್ರದೇಶಗಳಲ್ಲಿ ಮಳೆ ಹೆಚ್ಚಾಗುವ ಲಕ್ಷಣಗಳಿವೆ. ಸೆಪ್ಟೆಂಬರ್ 22ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.