15.10.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ ಮೋಡ ಮತ್ತು ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಒಂದಿಲ್ಲೊಂದು ಕಡೆ ಗುಡುಗು ಸಹಿತ ಹಿಂಗಾರು ಮಳೆ ಮುಂದುವರಿಯುವ ಮುನ್ಸೂಚನೆ ಇದೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಸಹ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದ್ದರೂ ಪ್ರಮಾಣ ಸ್ವಲ್ಪ ಕಡಿಮೆ ಇರಬಹುದು. ಈಗಿನಂತೆ ಮುಂದಿನ 10 ದಿನಗಳವರೆಗೂ ಮಲೆನಾಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಮಧ್ಯ ಒಂದೆರಡು ದಿನಗಳಲ್ಲಿ ಪ್ರಮಾಣ ಸ್ವಲ್ಪ ಕಡಿಮೆ ಇರಬಹುದು.
ಒಳನಾಡು : ಉತ್ತರ ಒಳನಾಡಿನ ದಾವಣಗೆರೆ, ವಿಜಯನಗರ, ಬಳ್ಳಾರಿ, ರಾಯಚೂರು, ವಿಜಾಪುರ, ಕಲಬುರ್ಗಿ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮುಂದಿನ 10 ದಿನಗಳವರೆಗೂ ರಾಜ್ಯದ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಅರಬ್ಬಿ ಸಮುದ್ರದ ಕಡೆಯಿಂದ ಶ್ರೀಲಂಕಾ, ತಮಿಳುನಾಡು ಮೂಲಕ ಗಾಳಿಯ ಪ್ರವೇಶದ ಜೊತೆಗೆ ಹಿಂಗಾರು ಮಾರುತಗಳು ಸೇರಿಕೊಂಡು ರಾಜ್ಯದಲ್ಲಿ ಉತ್ತಮ ಮಳೆಯಾಗುವ ಲಕ್ಷಣಗಳಿವೆ. ಸುಮಾರು ಅಕ್ಟೊಬರ್ 18,19ರ ಸಮಯದಲ್ಲಿ ಕೇರಳ ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಇದರಿಂದ ಹಿಂಗಾರು ಮತ್ತಷ್ಟು ಚುರುಕಾಗುವ ಲಕ್ಷಣಗಳಿವೆ. ಬದಲಾವಣೆಯನ್ನು ಕಾದು ನೋಡಬೇಕಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.


