Advertisement
ವೆದರ್ ಮಿರರ್

ಹವಾಮಾನ ವರದಿ | 14-10-2025 | ಮಳೆ ಮತ್ತಷ್ಟು ಚುರುಕಾಗುವ ಲಕ್ಷಣ ಇದೆ, ಕಾರಣವೇನು..?

Share

15.10.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ ಮೋಡ ಮತ್ತು ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಒಂದಿಲ್ಲೊಂದು ಕಡೆ ಗುಡುಗು ಸಹಿತ ಹಿಂಗಾರು ಮಳೆ ಮುಂದುವರಿಯುವ ಮುನ್ಸೂಚನೆ ಇದೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಸಹ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದ್ದರೂ ಪ್ರಮಾಣ ಸ್ವಲ್ಪ ಕಡಿಮೆ ಇರಬಹುದು. ಈಗಿನಂತೆ ಮುಂದಿನ 10 ದಿನಗಳವರೆಗೂ ಮಲೆನಾಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಮಧ್ಯ ಒಂದೆರಡು ದಿನಗಳಲ್ಲಿ ಪ್ರಮಾಣ ಸ್ವಲ್ಪ ಕಡಿಮೆ ಇರಬಹುದು.

ಒಳನಾಡು : ಉತ್ತರ ಒಳನಾಡಿನ ದಾವಣಗೆರೆ, ವಿಜಯನಗರ, ಬಳ್ಳಾರಿ, ರಾಯಚೂರು, ವಿಜಾಪುರ, ಕಲಬುರ್ಗಿ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.  ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮುಂದಿನ 10 ದಿನಗಳವರೆಗೂ ರಾಜ್ಯದ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

ಅರಬ್ಬಿ ಸಮುದ್ರದ ಕಡೆಯಿಂದ ಶ್ರೀಲಂಕಾ, ತಮಿಳುನಾಡು ಮೂಲಕ ಗಾಳಿಯ ಪ್ರವೇಶದ ಜೊತೆಗೆ ಹಿಂಗಾರು ಮಾರುತಗಳು ಸೇರಿಕೊಂಡು ರಾಜ್ಯದಲ್ಲಿ ಉತ್ತಮ ಮಳೆಯಾಗುವ ಲಕ್ಷಣಗಳಿವೆ. ಸುಮಾರು ಅಕ್ಟೊಬರ್ 18,19ರ ಸಮಯದಲ್ಲಿ ಕೇರಳ ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಇದರಿಂದ ಹಿಂಗಾರು ಮತ್ತಷ್ಟು ಚುರುಕಾಗುವ ಲಕ್ಷಣಗಳಿವೆ. ಬದಲಾವಣೆಯನ್ನು ಕಾದು ನೋಡಬೇಕಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

28 minutes ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

1 day ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

1 day ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

2 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 days ago