#WeatherMirror | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ | ರಾಜ್ಯದಲ್ಲಿ 4 ದಿನಗಳ ಕಾಲ ಮಳೆ ಸಾಧ್ಯತೆ |

September 9, 2023
1:00 PM
ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿಯ ಬಹುತೇಕ ಕಡೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ.

ಮುಂಗಾರು ಮಳೆ  ರಾಜ್ಯದಲ್ಲಿ ಈ ಬಾರಿ ಕೈಕೊಟ್ಟಿತು. ರಾಜ್ಯದ 120ಕ್ಕೂ ಹೆಚ್ಚು ತಾಲೂಕುಗಳನ್ನು ಬರ ಪೀಡಿತ ತಾಲೂಕುಗಳನ್ನಾಗಿ ಘೋಷಿಸಲು ಸರ್ಕಾರ ಸಿದ್ಧತೆ ನಡೆಸಿದೆ. ರೈತನ ಪಾಡು ಮೂರಾಬಟ್ಟೆಯಾಗಿದೆ. ಅವನನ್ನು ನಂಬಿ ಬದುಕುವ ಕೋಟಿ ಕೋಟಿ ಜನ ಈ ಬಾರಿ ಪರದಾಡಬೇಕಾಗುವುದು ಖಚಿತ. ಈ ಮಧ್ಯೆ ಬಂಗಾಳಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ 4 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿಯ ಬಹುತೇಕ ಕಡೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ. ಉತ್ತರ ಒಳನಾಡಿನ ರಾಯಚೂರು, ಬೀದರ್, ಕೊಪ್ಪಳ, ಕಲಬುರಗಿ, ವಿಜಯಪುರ ಹಾಗೂ ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ಮಳೆಯಾಗುವ ಸಾಧ್ಯತೆಯಿದೆ.

ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಭಾರೀ ಮಳೆಯ ಮುನ್ಸೂಚನೆಯನ್ನು ನೀಡಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಉಡುಪಿ ಜಿಲ್ಲೆಗಳಿಗೆ ಇಂದಿನಿಂದ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಒಂದೆರಡು ಸಲ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ ಹಾಗೂ ಚಾಮರಾಜನಗರದಲ್ಲೂ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಚಂಡಮಾರುತ ಲೆಕ್ಕದಲ್ಲಾದರು ಒಂದಿನಿತು ಮಮಳೆ ಬಿದ್ದರೆ ನಾಡಿನ ಜನತೆ ಧನ್ಯ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸರ್ಕಾರಿ ವೈದ್ಯರು ಆಸ್ಪತ್ರೆಗಳಲ್ಲಿ ಬೆಳಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ಇರಬೇಕು- ಸಚಿವ ಶರಣಪ್ರಕಾಶ್ ಪಾಟೀಲ್
March 12, 2025
7:19 AM
by: The Rural Mirror ಸುದ್ದಿಜಾಲ
 ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧ
March 12, 2025
7:13 AM
by: The Rural Mirror ಸುದ್ದಿಜಾಲ
ಕೆಂಪು ಮೆಣಸಿನಕಾಯಿ ಬೆಳೆಗಾರರಿಗೆ ಸಂಕಷ್ಟ | ಬೆಂಬಲ ಬೆಲೆ ಯೋಜನೆ ರಾಜ್ಯಕ್ಕೂ ವಿಸ್ತರಿಸುವಂತೆ ಮುಖ್ಯಮಂತ್ರಿ ಪತ್ರ | ಕೇಂದ್ರದ ಗಮನ ಸೆಳೆದ ಸಚಿವರು |
March 12, 2025
7:10 AM
by: The Rural Mirror ಸುದ್ದಿಜಾಲ
ಅಕ್ರಮ ಮರಳು ಗಣಿಗಾರಿಕೆ | 5 ವರ್ಷಗಳಲ್ಲಿ 47 ಕೋಟಿ ರೂಪಾಯಿ ದಂಡ ಸಂಗ್ರಹ
March 12, 2025
6:58 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror