ಮುಂಗಾರು ಮಳೆ ರಾಜ್ಯದಲ್ಲಿ ಈ ಬಾರಿ ಕೈಕೊಟ್ಟಿತು. ರಾಜ್ಯದ 120ಕ್ಕೂ ಹೆಚ್ಚು ತಾಲೂಕುಗಳನ್ನು ಬರ ಪೀಡಿತ ತಾಲೂಕುಗಳನ್ನಾಗಿ ಘೋಷಿಸಲು ಸರ್ಕಾರ ಸಿದ್ಧತೆ ನಡೆಸಿದೆ. ರೈತನ ಪಾಡು ಮೂರಾಬಟ್ಟೆಯಾಗಿದೆ. ಅವನನ್ನು ನಂಬಿ ಬದುಕುವ ಕೋಟಿ ಕೋಟಿ ಜನ ಈ ಬಾರಿ ಪರದಾಡಬೇಕಾಗುವುದು ಖಚಿತ. ಈ ಮಧ್ಯೆ ಬಂಗಾಳಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ 4 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿಯ ಬಹುತೇಕ ಕಡೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ. ಉತ್ತರ ಒಳನಾಡಿನ ರಾಯಚೂರು, ಬೀದರ್, ಕೊಪ್ಪಳ, ಕಲಬುರಗಿ, ವಿಜಯಪುರ ಹಾಗೂ ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ಮಳೆಯಾಗುವ ಸಾಧ್ಯತೆಯಿದೆ.
ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಭಾರೀ ಮಳೆಯ ಮುನ್ಸೂಚನೆಯನ್ನು ನೀಡಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಉಡುಪಿ ಜಿಲ್ಲೆಗಳಿಗೆ ಇಂದಿನಿಂದ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಒಂದೆರಡು ಸಲ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ ಹಾಗೂ ಚಾಮರಾಜನಗರದಲ್ಲೂ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಚಂಡಮಾರುತ ಲೆಕ್ಕದಲ್ಲಾದರು ಒಂದಿನಿತು ಮಮಳೆ ಬಿದ್ದರೆ ನಾಡಿನ ಜನತೆ ಧನ್ಯ.
ಹಿಂದೂ ಧರ್ಮದ ವಿಶೇಷತೆ ಎಂದರೆ ಅದು ಸ್ವ ವಿಮರ್ಶೆಯ (self -criticism) ಸ್ವಾತಂತ್ರ್ಯ…
ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಹೊಸತನದ ಶೋರೂಮ್ ಅನಾವರಣದ ಅಂಗವಾಗಿ ಮೇ 9…
ಮುಳಿಯ ನೂತನ ನವೀಕೃತ ವಿಸ್ತೃತ ಆಭರಣ ಮಳಿಗೆಯ ಅನಾವರಣ ಪ್ರಯುಕ್ತ ಕೃಷಿ ಬೆಳವಣಿಗೆಗೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸರ್ಕಾರದ ಎಲ್ಲಾ…
ರಾಜ್ಯದ 6 ಜಿಲ್ಲೆಗಳಲ್ಲಿ ತೋಟಗಾರಿಕಾ ಬೆಳೆಗಳಿಗೆ ಅನುಕೂಲವಾಗುವಂತೆ ಶೀಥಲೀಕರಣ ಘಟಕಗಳನ್ನು ನಿರ್ಮಿಸಲಾಗುತ್ತಿದೆ ಎಂದು…