ಕರ್ನಾಟಕದಲ್ಲಿ ಹಿಂಗಾರು ಮಳೆ ಜೋರಾಗಿದ್ದು ಕಳೆದೊಂದು ವಾರದಿಂದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ಮಳೆ ಭಾರೀ ಅವಾಂತರ ಸೃಷ್ಟಿಸಿದೆ. ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲೂ ಮಳೆಯ ಆರ್ಭಟ ಜೋರಾಗಿದೆ. ರಾಜ್ಯಾದ್ಯಂತ ಮುಂದಿನ 6 ದಿನಗಳ ಕಾಲ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು, ಕೋಲಾರ, ಮಂಡ್ಯ, ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿತ್ರದುರ್ಗ ದಾವಣಗೆರೆ, ಬೆಳಗಾವಿ, ಉತ್ತರ ಕನ್ನಡ, ಉಡುಪಿ ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ ಸೇರಿದಂತೆ 16 ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಭಾರೀ ಮಳೆಯಾಗುವ ಹಿನ್ನೆಲೆ ರಾಜ್ಯದ 16 ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಕಡಿಮೆ ಮಳೆ ಆಗಲಿದ್ದು ಮುಂದಿನ 5 ದಿನಗಳಲ್ಲಿ ಬೆಂಗಳೂರಿನಲ್ಲೂ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ತಿಳಿಸಿದ್ದಾರೆ.
ಅಕ್ರಮವಾಗಿ ಸುಮಾರು 68 ಟನ್ ಅಡಿಕೆ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಅಸ್ಸಾಂ ಪೊಲೀಸರು…
ಬದುಕಿನ ಒಂದೊಂದು ಅಂಗವೂ ‘ಕಲಾತ್ಮಕ’. ಒದಗುವ ಸುಭಗತನವು ಅನುಭವವೇದ್ಯ. ಅಡುಗೆ ಮನೆಯು ಬರೇ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಬೇಸಿಗೆ ತಾಪಮಾನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೃಗಾಲಯದ ಪ್ರಾಣಿಗಳು ಸುಡುಬಿಸಿಲಿಗೆ ಕಂಗಾಲಾಗಿದ್ದು, ಮಧ್ಯಾಹ್ನದ ವೇಳೆಯಲ್ಲಿ…
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಉತ್ಪನ್ನವನ್ನು ಖರೀದಿಸುವ…
ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಏಕೀಕೃತ ಪಾವತಿ ಇಂಟರ್ ಫೇಸ್ - ಯುಪಿಐ ಸೇವೆಯ…