Advertisement
ವೆದರ್ ಮಿರರ್

ಹವಾಮಾನ ವರದಿ | 21-08-2025 | ಆ.25 ರ ನಂತರ ಮತ್ತೆ ಒಂದು ವಾರ ಮಳೆ…!

Share

22.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕರಾವಳಿ ತೀರ ಭಾಗಗಳಲ್ಲಿ ಅಲ್ಲಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.  ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 24ರ ತನಕ ಮೋಡ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯಲಿದೆ. ಬಂಗಾಳಕೊಲ್ಲಿಯ ಒಡಿಸ್ಸಾ ಕರಾವಳಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತದ ಪರಿಣಾಮದಿಂದ 25 ರಿಂದ 4 ರಿಂದ 5 ದಿನಗಳ ಕಾಲ ಮಳೆಯ ಮುನ್ಸೂಚನೆ ಇದೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಸಾಧ್ಯತೆ ಇದೆ. ಈಗಿನಂತೆ ಆಗಸ್ಟ್ 24ರ ತನಕ ಇದೇ ವಾತಾವರಣ ಮುಂದುವರಿಯುವ ಸಾಧ್ಯತೆಗಳಿದ್ದು, 25 ರಿಂದ 31ರ ತನಕ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ” WhatsApp Channel   ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…

ಒಳನಾಡು : ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯನಗರ, ದಾವಣಗೆರೆ, ಬಳ್ಳಾರಿ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಒಂದೆರಡು ತುಂತುರು ಮಳೆಯ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.
ದಕ್ಷಿಣ ಒಳನಾಡಿನ ಕೋಲಾರ ಹಾಗೂ ಬೆಂಗಳೂರು ದಕ್ಷಿಣ ಭಾಗಗಳಲ್ಲಿ ಸಂಜೆ, ರಾತ್ರಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಉತ್ತರ ಒಳನಾಡಿನಲ್ಲಿ ಆಗಸ್ಟ್ 22 ರಿಂದ 25 ರ ತನಕ ಹೆಚ್ಚಿನ ಅವಧಿಯೂ ಬಿಸಿಲಿನ ವಾತಾವರಣ ಇರಲಿದೆ. ದಕ್ಷಿಣ ಒಳನಾಡಿನಲ್ಲಿ ಆಗಸ್ಟ್ 23 ರ ತನಕ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದ್ದು, 24ರಿಂದ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ.  ಆಗಸ್ಟ್ 26 ರಿಂದ ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮದಿಂದ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಆರಂಭವಾಗುವ ನಿರೀಕ್ಷೆ ಇದೆ.

ಆಗಸ್ಟ್ 25ರಂದು ಬಂಗಾಳಕೊಲ್ಲಿಯ ಒಡಿಸ್ಸಾ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ” WhatsApp Channel   ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ

ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯ ಪ್ರಗತಿ ಮೌಲ್ಯಮಾಪನದಲ್ಲಿ ತುಮಕೂರು ಜಿಲ್ಲೆ ಕರ್ನಾಟಕದಲ್ಲಿ ಮೊದಲ…

16 hours ago

ಬರಗಾಲದಲ್ಲೂ ಬೆಳೆ ಉಳಿಸಿದ ಸಾವಯವ ಕೃಷಿ – ಸಾವಯವ ಕೃಷಿ ಅಬ್ಬರಿಸಿ ಬರುವುದಿಲ್ಲ- ಮುಗ್ಗರಿಸಿ ಬೀಳುವುದಿಲ್ಲ..!

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿಯ ಸಾವಯವ ಕೃಷಿಕ ಕಲ್ಲಪ್ಪ ಪಂಡಿತಪ್ಪ ನೇಗಿನಾಳ…

20 hours ago

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…

2 days ago

ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…

2 days ago

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

3 days ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

3 days ago