18.11.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಒಣ ಹವೆಯ ಮುನ್ಸೂಚನೆ ಇದೆ. ಆದರೆ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆಗಳಿದ್ದು, ರಾತ್ರಿಯ ವೇಳೆಯಲ್ಲಿ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ ಸುತ್ತಮುತ್ತ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ ನವೆಂಬರ್ 18 ರಿಂದ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮಳೆ ಆರಂಭವಾಗುವ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವೆ ಮುಂದುವರಿಯಲಿದೆ.
ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ ರಾತ್ರಿ ಮೋಡದ ವಾತಾವರಣ ಇರಬಹುದು. ಶಿವಮೊಗ್ಗ ಜಿಲ್ಲೆಯಲ್ಲಿ ಒಣ ಹವೆ ಮುಂದುವರಿಯಲಿದೆ. ಈಗಿನಂತೆ ನವೆಂಬರ್ 18ರಿಂದ ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಮಳೆ ಆರಂಭವಾಗುವ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ನವೆಂಬರ್ 19ರಂದು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ.ಈಗಿನಂತೆ ಉತ್ತರ ಒಳನಾಡಿನಲ್ಲಿ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ ಹಾಗೂ ಒಣ ಹವೆ ಮುಂದುವರಿಯಲಿದೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಸುತ್ತಮುತ್ತ ತುಂತುರು ಮಳೆಯ ಮುನ್ಸೂಚೆನೆ ಇದ್ದು, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ ಜಿಲ್ಲೆಗಳ ಅಲ್ಲಲ್ಲಿ ನವೆಂಬರ್ 18ರಿಂದ ಮಳೆ ಆರಂಭವಾಗುವ ಮುನ್ಸೂಚನೆ ಇದೆ.
ಶ್ರೀಲಂಕಾ ಪೂರ್ವ ಕರಾವಳಿಯಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಪರಿಣಾಮದಿಂದ ಬಂಗಾಳಕೊಲ್ಲಿಯ ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಭಾವದಿಂದ ರಾಜ್ಯದಲ್ಲಿ ಮಳೆಯ ಸಾಧ್ಯತೆಗಳಿವೆ.
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…